ಕುಣಿಗಲ್: ಬೈಕ್ ಚಾಲಕ ಆಯತಪ್ಪಿ ರಸ್ತೆ ಬದಿಯ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯ ಉರ್ಕೆ ಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ಮೃತ ಬೈಕ್ ಸವಾರಳನ್ನು ದಿವ್ಯಶ್ರೀ(23) ಎಂದು ಗುರುತಿಸಲಾಗಿದ್ದು ಈಕೆ ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಸಹೋದ್ಯೋಗಿ ಕೌಶಿಕ್ ಎಂಬಾತನೊಂದಿಗೆ ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ತೆರಳಿ ವಾಪಸ್ ಹಿಂದಿರುಗುವಾಗ ಘಟನೆ ನಡೆದಿದೆ, ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ತಡೆಗೋಡೆಗೆ ಬೈಕ್ ಡಿಕ್ಕಿ- ಯುವತಿ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು