ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಮತ್ತು ಕೆ.ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕ್ಕೆ ಸೂಕ್ತ ಆದೇಶ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ನಿರ್ಬಂಧ ವಿಧಿಸಿ ಅಧೀನ ನ್ಯಾಯಾಲಯ ಆದೇಶಿಸಿದ್ದರೂ, ರನ್ಯಾ ರಾವ್ ಕುಟುಂಬ ವಿರುದ್ಧ ಆಧಾರರಹಿತ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಮಾಧ್ಯಮ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ, ನ್ಯಾಯಾಲಯದ ಆದೇಶವಿದ್ದರೂ ಈ ರೀತಿಯ ಸುದ್ದಿ ಪ್ರಸಾರ ತಡೆಯುವುದಕ್ಕಾಗಿ ಅಗತ್ಯ ಮಾರ್ಗಸೂಚಿ ಜಾರಿ ಮಾಡುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆ ಏ.8ಕ್ಕೆ ಮುಂದೂಡಿದೆ.
ರನ್ಯಾ ನ್ಯೂಸ್ ನಿರ್ಬಂಧಕ್ಕೆ ನಿರ್ದೇಶನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು