ತುಮಕೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಾದ ಗಾರ್ಡನ್ ರಸ್ತೆ ಹಾಗೂ ಟೂಡ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೈಸೂರಿನ ರಾಕೇಶ್ ಹಾಗೂ ಮಂಡ್ಯದ ಹರ್ಷ ಎಂಬ ಇಬ್ಬರು ವ್ಯಕ್ತಿಗಳನ್ನು ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿ ಅವರಿಂದ 13,60,000/-ರೂ ಮೌಲ್ಯದ 17 ಕೆಜಿ 89 ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆ ಜಿಲ್ಲಾ ಎಸ್ ಪಿ ಮಾರ್ಗದರ್ಶನದಲ್ಲಿ ಸಿಇಎನ್ ಠಾಣೆಯ ಡಿವೈಎಸ್ ಪಿ ಜಯಲಕ್ಷ್ಮಮ್ಮ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಶಾಲಾ ಕಾಲೇಜು ಆವರಣದ ಬಳಿ ಹಾಗೂ ಪಾರ್ಕ್ಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸ್ ಕಂಟ್ರೋಲ್ ರೂಮ್ 112 ಗೆ ಕರೆ ಮಾಡಲು ಜಿಲ್ಲಾ ಎಸ್ ಪಿ ಪೊಲೀಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
13 ಲಕ್ಷ ಮೌಲ್ಯದ ಗಾಂಜಾ ವಶ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು