ಬೆಂಗಳೂರು: ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂ ನ 13 ನೇ ಕ್ರಾಸ್ ನಲ್ಲಿ ಬಟ್ಟೆ ಐರನ್ ಮಾಡಿದ ಬಳಿಕ ಸ್ವಿಚ್ ಆಫ್ ಮಾಡದೇ ಮನೆಗೆ ಬೀಗ ಹಾಕಿ ಹೋಗಿದ್ದು, ಇದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ- ಮನೆಗೆ ಬೆಂಕಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು