ಮೈಸೂರು: ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ (48ವ), ಬಸವೇಗೌಡ (45), ವಿನೋದ್(17)ಮೃತರಾಗಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಯುಗಾದಿ ಹಬ್ಬ ಹಿನ್ನೆಲೆ ಹಸುಗಳನ್ನು ತೊಳೆಯಲು ವಿನೋದ್ ಕೆರೆಗೆ ಹೋಗಿದ್ದರು.
ಈ ವೇಳೆ ವಿನೋದ್ ನನ್ನು ಹಸು ಕೆರೆಗೆ ಎಳೆದೊಯ್ದಿದೆ. ಆತನ ರಕ್ಷಣೆಗೆ ಮುದ್ದೇಗೌಡ ಮತ್ತು ಬಸವೇಗೌಡ ಕೆರೆಗೆ ಇಳಿದಿದ್ದಾರೆ. ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರೂ ಮೃತಪಟ್ಟಿದ್ದಾರೆ.
ಕೆರೆಯಲ್ಲಿ ಮೂವರು ನೀರು ಪಾಲು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು