ಬೆಳಗಾವಿ: ಶಾಸಕ ರಾಜು ಕಾಗೆಯ ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು. ಬೆಳಗಾವಿಯಿಂದ ಕಿತ್ತೂರಿಗೆ ಕೆಲಸಕ್ಕೆಂದು ಬಸವರಾಜ ಮತ್ತು ಇಬ್ಬರು ಸ್ನೇಹಿತರು ಬೈಕ್ ನಲ್ಲಿ ಹೊರಟಿದ್ದರು ಈ ವೇಳೆ ಕಿತ್ತೂರು ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಸವರಾಜ ಪುಡಕಲ ಕಟ್ಟಿ (22) ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ, ಇನ್ನು ಬೈಕ್ ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಕಾಗೆ ಸಹೋದರನ ಪುತ್ರ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.