ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಉರುಳು ಸುತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಹೊಸ ಟೆನ್ಷನ್ ಶುರುವಾಗಿದೆ. ಮುಡಾ ಹಗರಣ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಇದ್ರಿಂದಾಗಿ ಸಿಎಂ ಗೆ ಹೊಸ ತಲೆನೋವು ಶುರುವಾಗಿದೆ.
ಈ ಮಧ್ಯೆ ಮುಡಾ ಕೇಸ್ ಬಗ್ಗೆ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಇಡಿ ತಕರಾರಿನ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆ ಮುಂದೂಡಿಕೆ ಮಾಡಿದೆ, ಕೋರ್ಟ್ ನಲ್ಲಿ ಇಡಿ ಪರವಾಗಿ ಮಧುಕರ್ ದೇಶಪಾಂಡೆ ವಾದ ಮಂಡಿಸಿದರು. ಹಿಂದಿನ ಕೆಲವು ಆದೇಶಗಳ ಬಗ್ಗೆ ಉಲ್ಲೇಖ ಮಾಡಿದರು. ಇಡಿ ಹಲವು ಅಂಶಗಳನ್ನ ಹಂಚಿಕೊಂಡಿದ್ರೂ, ಲೋಕಾಯುಕ್ತ ಅದನ್ನ ಪರಿಗಣಿಸಿಲ್ಲ ಎಂದು ಆರೋಪಿಸಿದರು.
ಇಡಿ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಇಡಿ ತಕರಾರು ಅರ್ಜಿ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಮುಡಾ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಸ್ನೇಹಮಯಿ ಅವರ ಅರ್ಜಿ ವಿಚಾರಣೆಯನ್ನು ಕೂಡ ಏಪ್ರಿಲ್ 5ಕ್ಕೆ ಕೋರ್ಟ್ ಮುಂದೂಡಿದೆ.