ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸಿದರು.
ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸಂಬಂಧ ಮತ್ತೊಬ್ಬ ಸಿಬ್ಬಂದಿಯನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 2014 -15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 62.77 ಕೋಟಿ ಸಾಲ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿದಂತೆ ಐದು ಕಡೆಯಲ್ಲಿ ದಾಳಿ ನಡೆಸಿದ್ದಾರೆ.
ಈ ಪ್ರಕಣದಲ್ಲಿ ಅಕ್ರಮ ನಡೆದಾಗ ಬ್ಯಾಂಕ್ ನ ಹಾಲಿ ಅಧ್ಯಕ್ಷರಾಗಿದ್ದಂತ ಆರ್.ಎಂ.ಮಂಜುನಾಥಗೌಡ ಅವರೇ ಅಧ್ಯಕ್ಷರಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಆ ಬಳಿಕ ಜಾಮೀನು ಪಡೆದಿದ್ದರು. ಇದೀಗ ಅವರನ್ನು ಮತ್ತೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.
ಬ್ಯಾಂಕ್ ಅಧ್ಯಕ್ಷ ಇಡಿ ಅಧಿಕಾರಿಗಳ ವಶಕ್ಕೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು