ವಿಜಯನಗರ: ನಗರದ ಜಂಬುನಾಥ ರಸ್ತೆಯಲ್ಲಿ ಬುಧವಾರ ರಾತ್ರಿ ಯುವಕನ ಬರ್ಬರ ಕೊಲೆ ಮಾಡಿದ ಆರೋಪಿ ಹುಚ್ಚಕಾಳಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ನಸುಕಿನಲ್ಲಿ ನಗರದ ಹೊರವಲಯದ ಮಹಾದೇವ ಇಂಡಸ್ಟ್ರೀಸ್ ಬಳಿ ನಡೆದಿದೆ.
ಕೊಲೆ ಆರೋಪಿ ಹುಚ್ಚಕಾಳಿ ಕೊಲೆಗೆ ಬಳಸಿದ ಚಾಕು ವಶಪಡಿಸಿಕೊಳ್ಳುವ ಪ್ರಯತ್ನದ ವೇಳೆ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ.ಆಗ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಐ ಹಾಗೂ ತನಿಖಾಧಿಕಾರಿ ಹುಲುಗಪ್ಪರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಅರೋಪಿ ನಡೆಸಿದ ದಾಳಿಯಿಂದ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಹೆಡ್ ಕಾನ್ ಸ್ಟೆಬಲ್ ಲಿಂಗರಾಜ್ ಮತ್ತು ಕಾನ್ ಸ್ಟೆಬಲ್ ಕೊಟ್ರೇಶ್ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಹಳೆ ದ್ವೇಷದ ಹಿನ್ನೆಲೆ ಹೊನ್ನೂರ ಸ್ವಾಮಿ ಎಂಬುವವರನ್ಬು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು.ಎಸ್ಪಿ ಶ್ರೀಹರಿಬಾಬು ಬಿಎಲ್, ಎಎಸ್ಪಿ ಸಲೀಂ ಪಾಷಾ ಡಿವೈಎಸ್ಪಿ ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದು, ಇಲ್ಲಿನ ಸರ್ಕಾರಿ 100 ಹಾಸಿಗೆ ಆಸ್ಪತ್ರೆಯಲ್ಲಿ ಆರೋಪಿ ಮತ್ತು ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.
ಕೊಲೆ ಆರೋಪಿ ಕಾಲಿಗೆ ಗುಂಡು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು