ರಾಜ್ಯದಲ್ಲಿ ಜಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಮಸಾಲೆ

156

Get real time updates directly on you device, subscribe now.

ತುರುವೇಕೆರೆ: 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಿ ಮತ್ತೆ ಬಿಜೆಪಿ ಸರಕಾರ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಕರ್ನಾಟ ಕ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷ ಹಾಗೂ ಶಾಸಕ ಮಸಾಲ ಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತುರುವೇಕೆರೆ ಪಟ್ಟಣಕ್ಕೆ ಆಗುಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕರ್ತರುಗಳು ಹಮ್ಮಿಕೊಂಡಿದ್ದ ಸಂಭ್ರಮೋತ್ಸವವನ್ನುಉದ್ದೇಶಿಸಿ ಮಾತನಾಡಿ, ತುರುವೇಕೆರೆ ಕ್ಷೇತ್ರದಲ್ಲೂ ಮ್ತತೆ ಬಿಜೆಪಿ ಜಯಬೇರಿ ಬಾರಿಸಲು ಪೂರಕವಾಗಿ ಕಾರ್ಯತಂತ್ರ ರೂಪಿಸಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜನಪರ ಯೋಜನೆಗಳನ್ನು ಪ್ರತಿ ಮನೆಮನೆಗೂ ಕಾರ್ಯಕರ್ತರು ತಲುಪಿಸಬೇಕಿದೆ. ಈ ಮೂಲಕ 2023 ರ ಚುನಾವಣೆಯಲ್ಲಿ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಸಲು ಕಾರ್ಯಕರ್ತರು ಸಜ್ಜಾಗಬೇಕಿದೆ. ಕ್ಷೇತ್ರದ ಮತದಾರರ ಆಶೀರ್ವಾದದಿಂದ 2023 ರ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಸಚಿವನಾಗಿ ಮತ್ತಷ್ಟು ಅಭಿವೃದ್ದಿ ಕಾರ್ಯ ಮಾಡುವೆ ಎಂದರು.

ಭಾರತೀಯ ಜನತಾ ಪಕ್ಷದ ಪರಿಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಶಾಸಕನಾದ್ದರಿಂದ ಇಂದು ಕರ್ನಾಟಕ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷನಾಗಲು ಸಾಧ್ಯವಾಗಿದೆ. ನನ್ನ ಮೇಲೆ ನಂಬಿಕೆ ಇರಿಸಿ ಅಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರಾಜ್ಯ ಸಾಂಬಾರು ಅಭಿವೃದ್ದಿ ಮಂಡಳಿಗೆ ಆದ್ಯಕ್ಷರನ್ನಾಗಿ ನೇಮಿಸಿದ್ದರು. ಇದೀಗ ಕರ್ನಾಟಕ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷರಾಗಿ ನೇಮಿಸಿರುವ ಮುಖ್ಯಮಂತ್ರಿಗೆ ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ ಸಮರ್ಪಿಸುತ್ತೇನೆ ಎಂದರು.
ಪಟ್ಟಣದ ಬಾಣಸಂದ್ರ ವೃತ್ತದಲ್ಲಿ ಮಸಾಲಜಯರಾಮ್ರನ್ನು ಕಾರ್ಯಕರ್ತರು ಭಾರಿ ಗಾತ್ರದ ಹಾರಗಳನ್ನು ಹಾಕಿ ಪೇಟ ತೊಡಿಸಿ ಭವ್ಯವಾಗಿ ಸ್ವಾಗತಿಸಿದರು. ನಾಸಿಕ್ ಡೋಲ್ ವಾದ್ಯಕ್ಕೆ ಹೆಜ್ಜೆ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಘಟಕದ ಅಧಕ್ಷ ಮೃತ್ಯುಂಜಯ, ಎಪಿಎಂಸಿ ಮಾಜಿ ಅಧಕ್ಷ ಕೊಂಡಜ್ಜಿ ವಿಶ್ವನಾಥ್, ಪೀಕಾರ್ಡ್ ಬ್ಯಾಂಕ್ ಸದಸ್ಯರಾದ ಟಿ.ವೆಂಕಟರಾಮಯ್ಯ, ಬಿ.ಸುರೇಶ್, ಪ.ಪಂ. ಉಪಾದ್ಯಕ್ಷೆ ಶೀಲಾ, ಸದಸ್ಯೆ ಆಶಾ ರಾಜಶೇಖರ್, ಯುವ ಬಿಜೆಪಿ ಘಟಕದ ಅಧ್ಯಕ್ಷ ಗೌರೀಶ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಅರಳಿಕೆರೆ ಶಿವಯ್ಯ ಮಾಚೇನಹಳ್ಳಿ ರಾಮಣ್ಣ ಹಲವರು ಇದ್ದರು.

Get real time updates directly on you device, subscribe now.

Comments are closed.

error: Content is protected !!