ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರಕಾರಿ ಜೂನಿಯರ್ ಕಾಲೇಜು ಮೈದಾನವನ್ನು ಕ್ರೀಡಾ ಚಟುವಟಿಕೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಹೊರತು ಪಡಿಸಿ ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ಬಾಡಿಗೆ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮುಂಜಾನೆ ಗೆಳೆಯರ ಬಳಗ, ಕನ್ನಡ ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಧನಿಯಕುಮಾರ್ ನೇತೃತ್ವದಲ್ಲಿ ಎಡಿಸಿಯವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್, ನೇತಾಜಿ ಶ್ರೀಧರ್, ಚಕ್ರವರ್ತಿ ಕ್ರಿಕೆಟರ್ಸ್ನ ಪ್ರಕಾಶ್, ಕ್ರೀಡಾಪುಟಗಳಾದ ಅನಿಲ್ ಮತ್ತು ಚೇತನ್ ಅವರು ಜಿಲ್ಲಾಧಿಕಾರಿಗಳ ಬಳಿ ನಿಯೋಗ ತೆರಳಿ 02-09-2011ರ ಸಾರ್ವಜನಿಕ ಶಿಕ್ಷಣ ಇಲಾಖೆಯೂ ಸರಕಾರಿ ಜೂನಿಯರ್ ಕಾಲೇಜು ಮೈದಾನದವನ್ನು ಕ್ರೀಡಾ ಚಟುವಟಿಕೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಹೊರತು ಪಡಿಸಿ ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ನೀಡದಂತೆ ಅಂದಿನ ಆಯುಕ್ತರು ಸುತ್ತೊಲೆ ಹೊರಡಿಸಿದ್ದರು, ರಾಜಕೀಯ ಮತ್ತಿತರರ ಖಾಸಗಿ ಕಾರ್ಯಕ್ರಮಗಳಿಗೆ ನೀಡುತ್ತಿರುವ ಪರಿಣಾಮ, ಸ್ವಚ್ಛತೆ ಕಾಪಾಡುವುದು ಕಷ್ಟವಾಗಿದೆ. ಹಾಗಾಗಿ ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಈ ಮೈದಾನದಲ್ಲಿ ಅಭ್ಯಾಸ ನಡೆಸುವ ಕ್ರೀಡಾಪಟುಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ನಗರದ ಮಹಾತ್ಮ ಗಾಂಧಿ ಸ್ಟೇಡಿಯಂನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೆ ಖಾಸಗಿ ಶಾಲೆಗಳ ಆಟದ ಮೈದಾನದಲ್ಲಿ ಸಾರ್ವಜನಿಕರ ಕ್ರೀಡಾ ಅಭ್ಯಾಸಕ್ಕೆ ಅವಕಾಶವಿಲ್ಲ. ಹೀಗಾಗಿ ಸುಮಾರು 3.50 ಲಕ್ಷ ಜನಸಂಖ್ಯೆ ಹೊಂದಿರುವ ತುಮಕೂರು ನಗರದ ಜನತೆಗೆ ವಾಯು ವಿಹಾರ, ಆಟೋಟಗಳಿಗೆ ಇರುವುದು ಸರಕಾರಿ ಜೂನಿಯರ್ ಕಾಲೇಜು ಮೈದಾನವೊಂದೆ. ಈ ಮೈದಾನವನ್ನು ಖಾಸಗಿಯವರಿಗೆ ಕಾರ್ಯಕ್ರಮ ಕೈಗೊಳ್ಳಲು ಅವಕಾಶ ನೀಡಿದರೆ, ಊಟ, ತಿಂಡಿಯ ಪ್ಲೇಟ್ಗಳು, ನೀರಿನ ಲೋಟ ಸೇರಿದಂತೆ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದರಿಂದ ಮೈದಾನ ಗಲೀಜಾಗಿ ಕಾಣುವುದಲ್ಲದೆ ಕ್ರೀಡಾಭ್ಯಾಸಕ್ಕೂ ತೊಂದರೆ ಉಂಟಾಗುತ್ತದೆ. ಆದ್ದರಿಂದ ಮೈದಾನವನ್ನು ಖಾಸಗಿ ಕಾರ್ಯಕ್ರಮಗಳಿಗೆ ನೀಡದಂತೆ ಕ್ರಮ ವಹಿಸಬೇಕು. ಮೈದಾನದ ನಿರ್ವಹಣೆಗೆ ನಿರ್ವಹಣಾ ಸಮಿತಿ ನೇಮಿಸಬೇಕು ಹಾಗೂ ಸ್ವಚ್ಛತೆ ಕಾಪಾಡಲು ಹೆಚ್ಚುವರಿ ಪೌರ ಕಾರ್ಮಿಕರನ್ನು ನೇಮಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾ.
Comments are closed.