ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಅರಿವು ಹೊಂದಲಿ: ಶಾಲಿನಿ

122

Get real time updates directly on you device, subscribe now.


ತುಮಕೂರು: ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಬಗ್ಗೆ ಅರಿವು ಪಡೆದುಕೊಂಡು ಅದರ ತ್ಯಾಗ ಬಲಿದಾನವನ್ನು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ಹೊರಬೇಕು ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಶಾಲಿನಿ ಎಂ ತಿಳಿಸಿದರು.

ನಗರದ ಸಿದ್ಧಗಂಗಾ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿ ಶೈಕ್ಷಣಿಕವಾಗಿ ಉನ್ನತ ಪದವಿ ಪಡೆಯುವುದರ ಜೊತೆಗೆ ದೇಶದ ಸಮಗ್ರತೆ ಐಕ್ಯತೆ ಹಾಗೂ ಭವಿಷ್ಯ ರೂಪಿಸುವ ಬಗ್ಗೆ ಆಸಕ್ತಿ ವಹಿಸಿದರೆ ಮಾತ್ರ ಭವ್ಯ ಭಾರತದಲ್ಲಿ ಯುವಕರ ಪ್ರಾತಿನಿಧ್ಯತೆ ಹೆಚ್ಚಲಿದೆ ಎಂದರು.

ಮೆಡಿಕಲ್ ಕಾಲೇಜು ಮೇಲ್ವಿಚಾರಕ ಡಾ.ನಿರಂಜನಮೂರ್ತಿ ಮಾತನಾಡಿ, ಪುರಾತನ ರಾಷ್ಟ್ರವಾದ ಭಾರತ ವಿವಿಧ ರೀತಿಯ ವರ್ಗ, ಧರ್ಮ, ಸಾಂಸ್ಕೃತಿಕತೆಯಲ್ಲಿ ವಿಭಿನ್ನತೆ ಹೊಂದಿದ್ದರೂ ಏಕತೆಯಿಂದ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಸೋದರತೆ ಭಾವ ಮೂಡಿದಾಗ ನಮ್ಮ ಗಣತಂತ್ರ ವ್ಯವಸ್ಥೆಗೆ ಅರ್ಥ ಬರುತ್ತದೆ ಎಂದರು.

ಸಿದ್ಧಗಂಗಾ ಆಸ್ಪತ್ರೆ ಸಿಇಓ ಡಾ.ಸಂಜೀವ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ವೈದ್ಯಕೀಯ ವಿಭಾಗದ ಮುಖ್ಯಸ್ಥರು, ಭೋದಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!