ಗುಬ್ಬಿ: ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಿದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೂರ್ಯಸ್ತದ ಒಳಗೆ ರಾಷ್ಟ್ರೀಯ ಧ್ವಜ ಇಳಿಸಿ ಗೌರವಯುತವಾಗಿ ನಡೆದುಕೊಳ್ಳಬೇಕಾದ ಪಟ್ಟಣ ಪಂಚಾಯತಿ ಅಧಿಕಾರಿಗಳು ರಾತ್ರಿ 8 ಗಂಟೆಯಾದರು ಸಹ ಬಾವುಟ ಇಳಿಸದೇ ಆಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯತಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ವಿರುದ್ಧ ಕಿಡಿ ಕಾರಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ, ಅಮೃತ ಮಹೋತ್ಸವ ಮಾಡಿರುವ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದನ್ನು ಖಂಡಿಸುತ್ತೇವೆ. ತಪ್ಪು ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ಮಾತನಾಡಿ ಕೊಡಲೇ ಜಿಲ್ಲಾಧಿಕಾರಿಗಳು ಈ ವಿಚಾರ ಬಗ್ಗೆ ಕ್ರಮ ವಹಿಸಿ ತಪ್ಪು ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈ ಗೊಳ್ಳಬೇಕು ಇಲ್ಲದಿದ್ದರೆ ದೊಡ್ಡ ಪ್ರಮಾಣದ ಹೋರಾಟ ಮಾಡುತ್ತೇವೆ ಮತ್ತು ನಮ್ಮ ಸದಸ್ಯರು ಕಪ್ಪು ಬಾವುಟ ಧರಿಸಿ ಕಚೇರಿಗೆ ತೆರಳವುದಾಗಿ ತಿಳಿಸಿದರು.
ಬಿಜೆಪಿ ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಮಾತನಾಡಿ, ಇಲ್ಲಿನ ಮುಖ್ಯ ಅಧಿಕಾರಿಗಳನ್ನ ಯಾರು ರಕ್ಷಣೆ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ. ಇಂತಹ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಂತಹ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ತಿಳಿಸಿದರು.
ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ರಾಷ್ಟ್ರದ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಸಹ ಅದು ದೊಡ್ಡ ತಪ್ಪು ಮಾಡಿರುವಂತಹ ಅಧಿಕಾರಿಗೆ ಜಿಲ್ಲಾಡಳಿತ ತಾಲೂಕು ಆಡಳಿತ ಕಾನೂನು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಶಿವಕುಮಾರ್ ಮಾತನಾಡಿ ಪಟ್ಟಣದ ಕೇಂದ್ರ ಬಿಂದುವಾದ ಪಟ್ಟಣ ಪಂಚಾಯಿತಿಯಲ್ಲಿ ಇಂತಹ ಘಟನೆ ನೋಡಿ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಪ್ರಕಾಶ್, ಮುಖಂಡರಾದ ಬಸವರಾಜು, ಶಶಿ ಕುಮಾರ್, ಲೋಕೇಶ್ ಇನ್ನಿತರರರು ಹಾಜರಿದ್ದರು.
Comments are closed.