ತುಮಕೂರು: ಸಂಕೀರ್ಣವಾದ ಹೃದಯದ, ಜನ್ಮಜಾತ ಹೃದಯರೋಗ ಸಮಸ್ಯೆ ಹಾಗೂ ಟ್ರಂಕಸ್ ರೋಗಕ್ಕೆ ತುತ್ತಾಗಿದ್ದ ಇಬ್ಬರು ಮಕ್ಕಳಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಗಿಸಿ, ಆ ಮಕ್ಕಳಿಗೆ ಮರುಹುಟ್ಟು ನೀಡುವ ಮೂಲಕ ನಗರದ ಶ್ರೀಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ವೈದ್ಯರ ತಂಡ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಮತ್ತು ಶ್ರೀಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ನಿರ್ದೇಶಕ ಡಾ.ಜಿ.ಪರಮೇಶ್ವರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನ್ಮಜಾತ ಹೃದಯರೋಗ ಸಮಸ್ಯೆಯಿಂದ ಬಳಲುತ್ತಿದ್ದ 20 ದಿನಗಳ ಹಸುಗೂಸು ಹೈದರಾಬಾದ್ ನಗರದ ನಿವಾಸಿ, ಟ್ರಂಕಸ್ ರೋಗಕ್ಕೆ ತುತ್ತಾಗಿರುವ 3 ತಿಂಗಳಿನ ಮಗು ಹಾಗೂ ತುಮಕೂರು ಗ್ರಾಮಾಂತರ ಪ್ರದೇಶದ ನಿವಾಸಿ, ಈ ಇಬ್ಬರು ಮಕ್ಕಳಿಗೆ ಆಗಿರುವ ಹೃದಯ ಶಸ್ತ್ರಚಿಕಿತ್ಸೆ ಅತಿಸೂಕ್ಷ್ಮವಾಗಿದ್ದು, ಯಶಸ್ವಿಯಾಗಿದೆ. ಮುಂದೆ ಆ ಮಕ್ಕಳ ಭವಿಷ್ಯದಲ್ಲಿ ಬದುಕಿನ ಬೆಳಕು ಮೂಡಲಿದೆ ಎಂಬ ಸಂದೇಶವನ್ನು ಸಿದ್ಧಾರ್ಥ ಆಸ್ಪತ್ರೆಯ ವೈದ್ಯರ ತಂಡ ನೀಡಿದೆ ಎಂದರು.
ಡಾ.ಡಾ.ತಮೀಮ್ ಅಹವ್ಮುದ್, ಹಾರ್ಟ್ ಸೆಂಟರ್ನ ಸಿಇಓ ಹಾಗೂ ಉಪ ಪ್ರಾಂಶುಪಾಲ ಡಾ.ಪ್ರಭಾಕರ್, ಬಾಲಕೃಷ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
Comments are closed.