ಫೆ. 8 ರಿಂದ ಕೃಷಿ, ಕೈಗಾರಿಕಾ ವಸ್ತು ಪ್ರದರ್ಶನ

174

Get real time updates directly on you device, subscribe now.


ತುಮಕೂರು: ಇತಿಹಾಸ ಪ್ರಸಿದ್ದ ಶ್ರೀಸಿದ್ದಗಂಗಾ ಮಠದ ಶ್ರೀಚನ್ನ ಬಸವೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಫೆ.08 ರಿಂದ 22 ರವರೆಗೆ ನಡೆಯಲಿದೆ ಎಂದು ವಸ್ತುಪ್ರದರ್ಶನ ಸಮಿತಿಯ ಕಾರ್ಯದರ್ಶಿ ಬಿ.ಗಂಗಾಧರಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಸರಕಾರದ 16, ಖಾಸಗಿಯ 5 ಮಳಿಗೆಗಳು ಸೇರಿ ಒಟ್ಟು 197ಮಳಿಗೆಗಳನ್ನು ತೆರೆಯಲಾಗಿದ್ದು, 15 ದಿನಗಳ ಕಾಲ ನಡೆಯುವ ಈ ವಸ್ತುಪ್ರದರ್ಶನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ ಎಂದರು.

ಕಳೆದ 59 ವರ್ಷಗಳಿಂದ ಈ ಭಾಗದ ಕೃಷಿಕರು, ಕೈಗಾರಿಕೋದ್ಯಮಿಗಳು ಹಾಗೂ ಜನಸಾಮಾನ್ಯರಿಗೆ ಆಯಾಯ ಕ್ಷೇತ್ರದ ಹೊಸ ಅವಿಷ್ಕಾರಗಳ ತಿಳುವಳಿಕೆ ನೀಡುವ ಉದ್ದೇಶದಿಂದ ನಡೆದಾಡುವ ದೇವರು ಎಂದೇ ಪ್ರಸಿದ್ದರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನವನ್ನು 1964ರಲ್ಲಿ ಆರಂಭಿಸಿದರು. ಇಂದು ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಏಕೈಕ ವಸ್ತು ಪ್ರದರ್ಶನ ಇದಾಗಿದೆ ಎಂದು ಗಂಗಾಧರಯ್ಯ ತಿಳಿಸಿದರು.
ಜಾನುವಾರುಗಳ ಜಾತ್ರೆ ಇಲ್ಲ

ಸಿದ್ದಗಂಗಾ ಜಾತ್ರೆಯ ಸಂಬಂಧ ನಡೆಯುವ ಈ ವಸ್ತು ಪ್ರದರ್ಶನದ ಸಂದರ್ಭದಲ್ಲಿ ಜಾನುವಾರು ಜಾತ್ರೆ ನಡೆಯುವುದು ಸಂಪ್ರದಾಯ. ಆದರೆ ಈ ಬಾರಿ ಸರಕಾರ ಅಂದರೆ ಪಶುಪಾಲನೆ ಮತ್ತು ಪಶುಸಂಗೋಪನಾ ಇಲಾಖೆ, ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮದ ಗಂಟು ರೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆ, ಸಂತೆ ನಿಷೇಧಿಸಿರುವ ಹಿನ್ನೇಲೆಯಲ್ಲಿ ಈ ಬಾರಿಯ ಜಾತ್ರೆಯ ವೇಳೆ ಜಾನುವಾರುಗಳ ಪರಿಷೆ ನಡೆಯುವುದಿಲ್ಲ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಜಿ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪಶುಪಾಲಕರು ಜಾತ್ರೆಯಲ್ಲಿ ಜಾನುವಾರು ಕೊಳ್ಳುವವರು, ಮಾರಾಟಗಾರರು ಸಹಕರಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಿದ್ದಗಂಗಾ ವಸ್ತು ಪ್ರದರ್ಶನ ಸಮಿತಿ ಸಹ ಕಾರ್ಯದರ್ಶಿ ಶಿವಕುಮಾರ್, ಸಮಿತಿ ಸಂಚಾಲಕ ಕೆಂ.ಬಾ.ರೇಣುಕಯ್ಯ ಇದ್ದರು.

Get real time updates directly on you device, subscribe now.

Comments are closed.

error: Content is protected !!