ಕುಣಿಗಲ್: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಹೇಮಾವತಿ ಕ್ರಾಸ್ ಬಳಿ ಸಂಭವಿಸಿದೆ.
ಮೃತನನ್ನು ಚನ್ನಪಟ್ಟಣದ ಖಾಸಗಿ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ (40) ಎಂದು ಗುರುತಿಸಲಾಗಿದೆ. ಈತ ಕಾರ್ಯನಿಮಿತ್ತ ಹಾಸನಕ್ಕೆ ತೆರಳಿದ್ದು, ಸೋಮವಾರ ಬೆಳಗ್ಗೆ ಹಾಸನ ಕಡೆಯಿಂದ ಚನ್ನಪಟ್ಟಣಕ್ಕೆ ತೆರಳಲು ಹೇಮಾವತಿ ಕ್ರಾಸ್ ಸಮೀಪ ಬೈಕ್ ತಿರುವು ಪಡೆಯುವಾಗ, ವೇಗವಾಗಿ ಬಂದ ಕಾರು ಬೈಕ್ಗೆ ಗುದ್ದಿ ಪರಾರಿ ಆದ ಕಾರಣ, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Comments are closed.