ರೆಡ್ಡಿಹಳ್ಳಿ ನೂತನ ಗ್ರಾಪಂ ಕಟ್ಟಡ ಉದ್ಘಾಟನೆ

ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ಪಕ್ಷಪಾತ ಮಾಡ್ತಿದೆ: ಎಂವಿವಿ

212

Get real time updates directly on you device, subscribe now.


ಮಧುಗಿರಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಅನುದಾನ ಹಂಚಿಕೆಯಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿ ಗ್ರಾಮದಲ್ಲಿ ಸೋಮವಾರ ನೂತನ ಗ್ರಾಪಂ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರ್ಕಾರವು ಅವರ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದ್ದು ಇತರೆ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದರು.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಜನತೆಯ ಋಣ ನಮ್ಮ ಮೇಲಿದ್ದು, ಅವರನ್ನು ವಿನಾಕಾರಣ ಕಚೇರಿಗಳಿಗೆ ಅಲೆದಾಡಿಸದೇ, ತುರ್ತಾಗಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಮೂಲಕ ಜನತೆಯ ವಿಶ್ವಾಸ ಗಳಿಸಬೇಕು ಎಂದು ಗಾ.ಪಂ ಅಧಿಕಾರಿಗಳಿಗೆ ಸೂಚಿಸಿದರು.

ನಾನು ಶಾಸಕನಾಗಿ ಆಯ್ಕೆಯಾದ ಮೊದಲ ವರ್ಷದ ಅವಧಿಯಲ್ಲಿ ತೀವ್ರ ಬರಗಾಲ ಕಾಡುತ್ತಿದ್ದು, ಈ ಸಂದರ್ಭದಲ್ಲಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಆರಂಭಿಸಿ ರೈತರ ಮನೆ ಬಾಗಿಲಿಗೆ ಮೇವು ತಲುಪಿಸಿ ಅನುಕೂಲ ಮಾಡಿಕೊಡಲಾಗಿತ್ತು. ತಾಲೂಕಿನಾದ್ಯಂತ 300 ಬೋರ್ವೆಲ್ ಗಳನ್ನು ಕೊರೆಸಲಾಗಿತ್ತು. ನಂತರ ಎರಡು ವರ್ಷ ಕೊರೊನಾ ಮಹಾಮಾರಿ ವ್ಯಾಪಿಸಿದ ಹಿನ್ನೆಲೆಯಲ್ಲಿ ಹಣದ ಅಭಾವ ಉಂಟಾಗಿ ಅಭಿವೃದ್ದಿ ಕಾಮಗಾರಿ ವಿಳಂಬಗೊಂಡಿತ್ತು ರೆಡ್ಡಿಹಳ್ಳಿ ಗ್ರಾಮಕ್ಕೆ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ತಾಲೂಕಿನಾದ್ಯಂತ 2600 ಮನೆಗಳು ಮಂಜೂರಾಗಿದ್ದು, ಕೆಲಸ ಪ್ರಗತಿಯಲ್ಲಿದೆ ಎಂದ ಅವರು ಮುಂದಿನ ದಿನಗಳಲ್ಲಿ ಚುನಾವಣೆ ಬರಲಿದ್ದು ನಿಮ್ಮ ಆಶೀರ್ವಾದ ನನ್ನ ಮೇಲಿರಲಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೊಡಿಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಡಗತ್ತೂರು ಗ್ರಾಮದ ಹತ್ತಿರ ಬಾಕ್ಸ್ ಕಲ್ವರ್ಟ್ ಕಾಮಗಾರಿಗೆ ಗುದ್ದಲಿ ಪೂಜೆ, ಸತ್ತಿಗೆನಹಳ್ಳಿ ಮತ್ತು ಬೆನಕನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ಅಂಬೇಡ್ಕರ್ ಭವನ ಕಾಮಗಾರಿಗೆ ಭೂಮಿ ಪೂಜೆ, ಮಧುಗಿರಿ ಪಾವಗಡ ಮುಖ್ಯ ರಸ್ತೆಯಿಂದ ಲಕ್ಲಿಹಟ್ಟಿ ಗ್ರಾಮದ ಸಂಪರ್ಕ ಸೇತುವೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ರೆಡ್ಡಿಳ್ಳಿ ಗ್ರಾಮ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷೆ ಮಂಜುಳಾ, ಮಿಡಿಗೇಶಿ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ಸುರೇಶ್, ಮುಖಂಡರಾದ ದತ್ತಾತ್ರೇಯ, ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜು, ತಾಪಂ ಇಓ ಲಕ್ಷ್ಮಣ್, ಪಿಡಿಓ ರಜನಿ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!