ತುಮಕೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ನ್ಯಾಯಾಲಯಗಳಲ್ಲಿ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ. ತಿಳಿಸಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಚ್ಛ ನ್ಯಾಯಾಲದ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಜಸ್ಟೀಸ್ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಾಕಿ ಇರುವ ಟ್ರಾಫಿಕ್ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿ ಶಿಫಾರಸ್ಸು ಮಾಡಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಅನುಮತಿ ನೀಡಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ 44 ಬಗೆಯ ಎಲ್ಲಾ ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ರಿಯಾಯಿತಿ ಪ್ರಕರಣಗಳಲ್ಲಿ ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ.50 ರಷ್ಟು ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿದ್ದು, ಸಂಚಾರಿ ದಂಡ ಪಾವತಿಗೆ 50 ಶೇಕಡಾ ರಿಯಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ದಂಡ ಪಾವತಿಸುತ್ತಿದ್ದು, ಪೊಲೀಸ್ ಠಾಣೆಯಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, ದಂಡ ವಿಧಿಸಿರುವುದರಲ್ಲಿ ಸಮಸ್ಯೆಗಳಿದ್ದರೆ ಸಂಚಾರ ನಿಯಂತ್ರಣ ಠಾಣೆಗಳಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಕಾರ್ಯ ನಿರ್ವಹಾಧಿಕಾರಿ ಬಿ.ಟಿ.ರಂಗಸ್ವಾಮಿ, ಜಿಲ್ಲಾ ಅಪರಾಧ ದಾಖಲೆ ವಿಭಾಗದ ಡಿವೈಎಸ್ ಪಿ ಧಮೇಂದ್ರ, ನಗರ ಸಂಚಾರ ಅರಕ್ಷಕ ನಿರೀಕ್ಷಕರಾದ ಶುಭಾಂಬಿಕ, ಕಾನೂನು ಪಾಲನೆ ಆರಕ್ಷಕ ನೀರಿಕ್ಷಕ ದಿನೇಶ್ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ ಸುದ್ದಿಗೋಷ್ಠಿಯಲ್ಲಿದ್ದರು.
Comments are closed.