ಮಹಿಳೆ, ಮಕ್ಕಳ ಸಾಗಾಣಿಕೆ ತಡೆಗೆ ಕ್ರಮ ವಹಿಸಿ

188

Get real time updates directly on you device, subscribe now.


ತುಮಕೂರು: ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಒಂದು ಕರಾಳ ಜಾಲವಾಗಿದ್ದು, ಈ ಪಿಡುಗಿನ ವಿರುದ್ಧ ಇಲಾಖೆಗಳು, ಸಂಘ ಸಂಸ್ಥೆಗಳು ಎಚ್ಚರ ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಮಹಿಳಾ ಇಲಾಖೆ ಕಚೇರಿ ಸಭಾಂಗಣದಲ್ಲಿ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ಭಾಗಿದಾರರ ಪುನಃಶ್ಚೇತನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಅನೈತಿಕ ಸಾಗಾಣಿಕೆ, ಜೀತಪದ್ಧತಿ, ಭಿಕ್ಷಾಟನೆ ಒಂದು ಸಾಮಾಜಿಕ ಪಿಡುಗಾಗಿ ಪರಿವರ್ತನೆಯಾಗಿರುವುದು ಆತಂಕಕಾರಿ ವಿಷಯ, ಇದರ ವಿರುದ್ಧ ಎಲ್ಲರೂ ಹೋರಾಡಬೇಕಿದೆ ಎಂದರು.

ಎಸ್ಟೇಟ್ಗಳು, ತೋಟಗಳಲ್ಲಿ ಮಕ್ಕಳನ್ನು ಮತ್ತು ಕುಟುಂಬಗಳನ್ನು ಜೀತಕ್ಕೆ ಇಟ್ಟುಕೊಂಡು ದುಡಿಸಿಕೊಳ್ಳುವ ಪ್ರಕರಣಗಳು ನಡೆಯುತ್ತಲೇ ಇವೆ. ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು. ಕೂಲಿಕಾರ್ಮಿಕರಾಗಿ ದುಡಿಮೆಗೆ ಬಳಸಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ, ಬಾಲ್ಯ ವಿವಾಹ, ಭಿಕ್ಷಾಟನೆ ಇತ್ಯಾದಿ ವಿಷಯಗಳ ಕುರಿತು ವಕೀಲರಾದ ಕವಿತ, ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಮಾತನಾಡಿದರು. ಪೊಲೀಸ್ ಸೇರಿದಂತೆ ವಿವಿಧ ಭಾಗಿದಾರ ಇಲಾಖೆಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!