ಯಾವುದೇ ಬೆಳೆಗೆ ಸರ್ಕಾರ ವೈಜ್ಞಾನಿಕ ಬೆಲೆ ನೀಡಿಲ್ಲ

182

Get real time updates directly on you device, subscribe now.


ಗುಬ್ಬಿ: ಯಾವುದೇ ಬೆಳೆಗಳಿಗೂ ಸರ್ಕಾರ ವೈಜ್ಞಾನಿಕ ಬೆಲೆ ನೀಡದೆ ರೈತರ ರಕ್ತ ಹೀರುತ್ತಿದೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ತಿಳಿಸಿದರು.

ತಾಲೂಕಿನ ಹಾಗಲವಾಡಿ ಗ್ರಾಮದಲ್ಲಿ ನೂತನ ರೈತ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿ, ಯಾವುದೇ ಸರಕಾರಗಳು ಬಂದರೂ ಸಹ ರೈತರ ಸಮಸ್ಯೆ ಮಾತ್ರ ಬಗೆಹರಿಸುತ್ತಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ನಮ್ಮ ಸಮಸ್ಯೆ ಬಗೆಹರಿಸಿಕೊಳಲು ಸಾಧ್ಯವಾಗುತ್ತದೆ. ಈಗಿನ ಸರಕಾರ ರೈತರ ಬದಲಿಗೆ ದೊಡ್ಡ ದೊಡ್ಡ ಕೈಗಾರಿಕಾ ಉದ್ಯಮಿಗಳಿಗೆ ಎಲ್ಲಾ ರೀತಿಯ ಸಹಕಾರ ಮಾಡುತ್ತಿದ್ದು ಅದಾನಿ ಅಂಬಾನಿಯಂತಹ ವ್ಯಕ್ತಿಗಳು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ವಿಶ್ವದ ಶ್ರೀಮಂತರು ಆಗುತ್ತಿದ್ದಾರೆ. ಆದರೆ ಕಷ್ಟಪಟ್ಟು ದುಡಿಯುವ ರೈತರಿಗೆ ಯಾವುದೇ ರೀತಿಯ ಶಾಶ್ವತ ಯೋಜನೆಗಳನ್ನು ನೀಡುತ್ತಿಲ್ಲ ಎಂದು ದೂರಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ತಾಲೂಕಿನ ಗಡಿ ಭಾಗವಾದ ಹಾಗಲವಾಡಿಯಲ್ಲಿ ಯಾವುದೇ ಅಭಿವೃದ್ಧಿ ಕಂಡಿಲ್ಲ. ಇಲ್ಲಿನ ಕೆರೆಗೆ ನೀರು ಹರಿಸವಲ್ಲಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆ. ರೈತರನ್ನು ಎದುರು ಹಾಕಿಕೊಂಡು ಇದುವರೆಗೂ ಯಾವ ಸರ್ಕಾರಗಳು ಕೆಲಸ ಮಾಡಲು ಸಾಧ್ಯವಾಗಿಲ್ಲ. ಆಡಳಿತ ಮಾಡಿರುವ ಗುಂಡೂರಾವ್ ಸರ್ಕಾರದಿಂದ ಹಿಡಿದು ಬೊಮ್ಮಾಯಿ ಸರ್ಕಾರದ ವರೆಗೆ ಯಾವುದೇ ಸರ್ಕಾರ ಬಂದರು ರೈತರ ಪರವಾಗಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಹೋಬಳಿ ಘಟಕದ ಅಧ್ಯಕ್ಷ ಕೃಷ್ಣ ಜೆಟ್ಟಿ ಮಾತನಾಡಿ ನಮ್ಮ ಹೋಬಳಿಗೆ ಯಾವುದೇ ಜನಪ್ರತಿನಿಧಿಗಳಿಂದ ಅಭಿವೃದ್ಧಿಯಾಗಿಲ್ಲ. ಈ ಬಾರಿ ಚುನಾವಣೆಗೆ ಮತ ಕೇಳಲು ಬಂದರೆ ಸರಿಯಾದ ಶಾಸ್ತಿ ಮಾಡುತ್ತೇವೆ ಹಾಗೂ ಮತದಾನ ಬಹಿಷ್ಕಾರ ಮಾಡಲು ಸಹ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.

ರೈತ ಮುಖಂಡ ಶಂಕರ್ ಮಾತನಾಡಿ, ಹೋಬಳಿ ಮಟ್ಟದಲ್ಲಿ ರೈತ ಕಚೇರಿ ತೆರೆದಿದ್ದು ಇಲ್ಲಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಮಸ್ಯೆ ಬಗೆಹರಿಸಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು ಮತ್ತು ಸಾಮಾಜಿಕ ಸೇವೆ ಮಾಡುತ್ತಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶ್, ಸಹ ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಜಗದೀಶ್, ಹೋಬಳಿ ಘಟಕದ ಪ್ರಧಾನ ಕಾರ್ಯದರ್ಶಿ ನಿಂಗರಾಜು, ಚನ್ನಬಸವಣ್ಣ ಒಡೆಯರ್, ರಾಜಣ್ಣ ಒಡೆಯರ್, ಮಂಜುನಾಥ್, ರಂಗಸ್ವಾಮಿ, ನರಸಿಂಹಮೂರ್ತಿ, ಬಾಣೇಶ್, ಮಹಾಲಿಂಗಪ್ಪ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!