ಫೆ.14 ಕ್ಕೆ ಮಡಿವಾಳ ಮಾಚಿದೇವರ ಜಯಂತೋತ್ಸವ

86

Get real time updates directly on you device, subscribe now.


ಶಿರಾ: ಶಿರಾ ತಾಲ್ಲೂಕು ಮಡಿವಾಳ ಮಾಚಿದೇವ ಸಂಘ, ಶ್ರೀವೀರಘಂಟೆ ಮಡಿವಾಳ ಮಾಚಿದೇವರ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀವೀರಘಂಟೆ ಮಡಿವಾಳ ಮಾಚಿದೇವರ ಜಯಂತೋತ್ಸವ ಹಾಗೂ ಶ್ರೀ ವೀರಘಂಟೆ ಮಡಿವಾಳ ಮಾಚಿದೇವರ ಒಂಭತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಫೆ.14ರ ಮಂಗಳವಾರ ನಗರದ ಶ್ರೀವೀರಘಂಟೆ ಮಡಿವಾಳ ಮಾಚಿದೇವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಶ್ರೀವೀರಘಂಟೆ ಮಡಿವಾಳ ಮಾಚಿದೇವ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಎಸ್.ಎನ್.ಮಹೇಶ್ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 10.35 ಗಂಟೆಗೆ ಶ್ರೀಮಾಚಿದೇವರ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಕಲಾ ತಂಡದೊಂದಿಗೆ ಮೆರವಣಿಗೆ ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸಮಾರಂಭ ನಡೆಯಲಿದ್ದು, ಶ್ರೀಮಾಚಿದೇವ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀಬಸವ ಮಾಚಿದೇವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಜಿಪಂ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ, ಕಲ್ಕೆರೆ ರವಿಕುಮಾರ್, ಆರ್.ಉಗ್ರೇಶ್ ಸೇರಿದಂತೆ ಹಲವರು ಭಾಗವಹಿಸುವರು.

Get real time updates directly on you device, subscribe now.

Comments are closed.

error: Content is protected !!