ಶಿರಾ: ಸರ್ಕಾರದ ಹಲವು ಯೋಜನೆ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಪಿಂಚಣಿ ಅದಾಲತ್ನಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ನಮ್ಮ ಶಿರಾ ತಾಲೂಕು ಪಡೆದಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ತಿಳಿಸಿದರು.
ಶಿರಾ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು, ಬಹುತೇಕ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ನಮ್ಮ ಸರಕಾರದ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಿ ಅದನ್ನು ಅರ್ಹ ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಈಗಾಗಲೇ ಲಕ್ಷ್ಮಿಸಾಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ದೇವಸ್ಥಾನ, ಶಾಲಾ ದುರಸ್ತಿ, ಅಂಗನವಾಡಿ, ಕುಡಿಯುವ ನೀರಿನ ವ್ಯವಸ್ಥೆ, ಪಶು ಆಸ್ಪತ್ರೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಪೂರ್ಣಗೊಂಡಿದ್ದು ಇನ್ನೂ ಅನೇಕ ಕೆಲಸ ಕಾಮಗಾರಿಯ ಕೊನೆಯ ಹಂತದಲ್ಲಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ, 20 ಫಲಾನುಭವಿಗಳಿಗೆ ಸಾಗುವಳಿ ಹಕ್ಕು ಪತ್ರ, 5 ಫಲಾನುಭವಿಗಳಿಗೆ ಸಾಗುವಳಿಯಿಂದ ಖಾತೆ ಬದಲಾವಣೆ ಪತ್ರ ನೀಡಲಾಯಿತು. ಕಂದಾಯ ಇಲಾಖೆಗೆ ಸಂಬಂಧಪಟ್ಟ 172 ಅರ್ಜಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಮತಾ, ಉಪ ತಹಶೀಲ್ದಾರ್ ಮಂಜುನಾಥ್, ತಾಲೂಕ್ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅನಂತರಾಜ್.ಪಿ.ಎಸ್, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ.ಮೋಹನ್, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಮಂಜು ಪ್ರಸಾದ್, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜಗೋಪಾಲ್, ವಲಯ ಅರಣ್ಯ ಅಧಿಕಾರಿ ನೌನೀತ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಹಂಸವಿ, ಸಿಡಿಪಿಓ ಪ್ರಸನ್ನ, ಬಿಸಿಎಂ ಅಧಿಕಾರಿ ಶಶಿಕಲಾ, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್,ಲಕ್ಷ್ಮೀ ಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಟ್ಯ ನಾಯಕ್, ಉಪಾಧ್ಯಕ್ಷೆ ಪದ್ಮ, ಮುಖಂಡರಾದ ರಾಮಣ್ಣ, ಶಿವಾನಂದ ಸ್ವಾಮಿ, ಮಹಾಂತೇಶ್, ಡಿ.ಹೆಚ್.ಗೌಡ, ಗೋವಿಂದಪ್ಪ, ಆನಂದ್, ಕರಿಯಣ್ಣ, ಯುವರಾಜ್, ರಾಮಯ್ಯ, ಹೊನ್ನಸ್ವಾಮಿ, ಪಂಚಾಯತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Comments are closed.