ಅಪಘಾತದಲ್ಲಿ ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಸಾವು

142

Get real time updates directly on you device, subscribe now.


ಶಿರಾ: ಅಪಘಾತದಲ್ಲಿ ಗಾಯಗೊಂಡಿದ್ದ ಶಿರಾ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಿದ್ದೇಶ್ವರ (52) ಸೋಮವಾರ ನಿಧನರಾಗಿದ್ದಾರೆ.

ತಾಲ್ಲೂಕಿನ ಜಾನಕಲ್ಲು ಗ್ರಾಮದಲ್ಲಿ ಶುಕ್ರವಾರ ನಾಟಕ ಕಾರ್ಯಕ್ರಮದ ಬಂದೋಬಸ್ತು ಕಾರ್ಯಕ್ಕೆ ಹೋಗುತ್ತಿದ್ದ ಸಮಯದಲ್ಲಿ ಬುಕ್ಕಾಪಟ್ಟಣ ಗ್ರಾಮದ ಸಮೀಪ ದ್ವಿಚಕ್ರ ವಾಹನದಿಂದ ಬಿದ್ದು ತಲೆಗೆ ತೀವ್ರವಾದ ಬೆಟ್ಟು ಬಿದ್ದು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!