11 ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ ಸಿದ್ಧ: ರವಿಶಂಕರ್

107

Get real time updates directly on you device, subscribe now.


ತುಮಕೂರು: ಬಿಜೆಪಿ ತುಮಕೂರು ಸಂಘಟನಾತ್ಮಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಂಡ ಜಯ ಪಡೆಯಲು ಕೇಂದ್ರ, ರಾಜ್ಯದ ಪ್ರಮುಖ ದಿಗ್ಗಜ ನಾಯಕರು ಮುಂಬರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸುತ್ತಿದ್ದು, ಬಿಜೆಪಿ ಭರ್ಜರಿ ತಯಾರಿ ನಡೆಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಕರ್ನಾಟಕ ವಿಧಾನಸಭೆ 2023ರ ಚುನಾವಣೆ ಹೈವೋಲ್ಟೇಜ್ ಚುನಾವಣೆ ಆಗಿರುವುದರಿಂದ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವಿಗೆ ರಣತಂತ್ರ ಹೆಣೆಯಲಾಗಿದೆ. ಬಿಜೆಪಿ ಅಭ್ಯರ್ಥಿಗಳ ಬಾರಿ ಅಂತರದ ಗೆಲುವಿಗೆ ಕೇಂದ್ರ, ರಾಜ್ಯ ಸರ್ಕಾರಗಳ ಜನಪರ ಮತ್ತು ಅಭಿವೃದ್ಧಿ ಪರ ಕಾರ್ಯಕ್ರಮ ಮತದಾರರಿಗೆ ತಲುಪುವಂತೆ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಹುರಿದುಂಬಿಸಿ, ಮನೆ ಮನ ಮುಟ್ಟುವ ಕಾರ್ಯಕ್ರಮ ನಡೆಸಲು ಬಿಜೆಪಿ ಕಾರ್ಯೋಮುಖವಾಗಿದೆ ಎಂದರು.

ಬಿಜೆಪಿ ಈಗಾಗಲೇ ಬೂತ್ ವಿಜಯ ಅಭಿಯಾನ ಹಾಗೂ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಎಲ್ಲಾ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರ ಪರಿಶ್ರಮದಿಂದ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಎರಡೂ ಕಾರ್ಯಕ್ರಮ ರಾಜ್ಯದ 58186 ಬೂತ್ಗಳಲ್ಲಿನ ಕಾರ್ಯಕರ್ತರನ್ನು ಚುನಾವಣಾ ಕಾರ್ಯಕ್ಕೆ ಸಜ್ಜಾಗಿ ತೊಡಗಿಸಿಕೊಂಡು ಕಾರ್ಯಕರ್ತರ ಕ್ಷಮತೆ ಹಾಗೂ ಚಟುವಟಿಕೆಗಳ ವೇಗ ಹೆಚ್ಚಿಸಿದೆ. ಇದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಅನುಕೂಲವಾಗುವಂತೆ ಫಲಾನುಭವಿಗಳ ಸಮಾವೇಶ, ವಿಜಯ ಸಂಕಲ್ಪ ಯಾತ್ರೆ ರೋಡ್ ಶೋ, ಮೋರ್ಚಾಗಳ ಸಮಾವೇಶ, ಪ್ರಗತಿ ರಥ ವಾಹನ ಹಾಗೂ ಜನಧ್ವನಿಯಾಗಿ ಪ್ರಣಾಳಿಕೆ ಸಲಹಾ ಅಭಿಯಾನವನ್ನು ಎಲ್ಲಾ ವರ್ಗ, ಸಮುದಾಯದ ಪ್ರಮುಖರು, ನಾಗರಿಕರು, ಮತದಾರರು ಭಾಗವಹಿಸಲು ರಣತಂತ್ರ ರೂಪಿಸಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆ ಸಲಹಾ ಅಭಿಯಾನದ ಸಹ ಸಂಚಾಲಕ ಕೆ.ಪಿ.ಮಹೇಶ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಜೆ.ಜಗದೀಶ್, ಜಿಲ್ಲಾ ಮಾಧ್ಯಮ ಪ್ರಮುಖ್ ಟಿ.ಆರ್.ಸದಾಶಿವಯ್ಯ, ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಸಹ ಸಂಚಾಲಕ ರಾಜೇಶ್ ಕಂಬೇಗೌಡ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಎ.ವಿಜಯಕುಮಾರ್, ಆಯರಹಳ್ಳಿ ಶಂಕರಪ್ಪ, ಸಂದೀಪ್ ಗೌಡ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!