ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮುಖ್ಯಮಂತ್ರಿ ಚಂದ್ರು

79

Get real time updates directly on you device, subscribe now.


ತುಮಕೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಎಪಿ ಗೆಲ್ಲಿಸುವುದೇ ನನ್ನ ಗುರಿ ಎಂದು ಎಎಪಿ ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ನಗರದ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳಿಂದ ಯಾವುದೇ ಅಭಿವೃದ್ಧಿಯಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಮತದಾರರು ಎಎಪಿ ಬೆಂಬಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಎಎಪಿ ಸಾಮಾಜಿಕ ನ್ಯಾಯದ ಪರವಾಗಿ, ಎಲ್ಲರನ್ನು ಒಂದೇ ರೀತಿಯಲ್ಲಿ ನೋಡುವ ಪಕ್ಷ. ಸರ್ವರಿಗೂ ಅವಕಾಶಗಳನ್ನು ಕಲ್ಪಿಸುತ್ತಿದೆ. ರಾಜ್ಯದಲ್ಲಿನ ಕುಟುಂಬ, ಸ್ವಾರ್ಥ, ಕೋಮು ರಾಜಕಾರಣಕ್ಕೆ ಜನರು ಬೇಸತ್ತಿದ್ದಾರೆ. ಮೂರು ಪಕ್ಷಗಳನ್ನು ದಿಕ್ಕರಿಸಿ, ಎಎಪಿಗೆ ಮತ ನೀಡಲಿದ್ದಾರೆ ಎಂದರು.

Get real time updates directly on you device, subscribe now.

Comments are closed.

error: Content is protected !!