ಮಾಜಿ ಸಿಎಂ ಯಡಿಯೂರಪ್ಪ ಅಭಿವೃದ್ಧಿ ಹರಿಕಾರ

ಬಿಎಸ್ ವೈ ಹುಟ್ಟುಹಬ್ಬ ಆಚರಣೆ- ವಿಜಯರಥ ಯಾತ್ರೆಗೆ ಚಾಲನೆ

73

Get real time updates directly on you device, subscribe now.


ತುಮಕೂರು: ತುಮಕೂರು ಬಿಜೆಪಿ ನಗರ ಮಂಡಲದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟು ಹಬ್ಬ ಆಚರಣೆ ಹಾಗೂ ಬಿಜೆಪಿ ಪಕ್ಷದ ವಿಜಯ ರಥ ಯಾತ್ರೆ ಉದ್ಘಾಟನೆ ನೆರವೇರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಗರದ ಆರ್ ಟಿಓ ಕಚೇರಿ ಆವರಣದಲ್ಲಿರುವ ಅಭಯ ಆಂಜನೇಯ ಸ್ವಾಮೀಜಿ ದೇವಾಲಯ ಬಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ರಾಜ್ಯದಲ್ಲಿ 4-5 ದಶಕಗಳ ಕಾಲ ಬಿಜೆಪಿಗೆ ಶಕ್ತಿಯಾಗಿ ಕೆಲಸ ಮಾಡಿದವರು ಬಿ.ಎಸ್.ಯಡಿಯೂರಪ್ಪ, ರೈತ ಹೋರಾಟಗಾರರಾಗಿ ತಮ್ಮ ಹೋರಾಟ ಆರಂಭಿಸಿ, ಹಂತ ಹಂತವಾಗಿ ಬೆಳೆದು ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನೆಡೆಸಿದ್ದಾರೆ. ಸೈಕಲ್ ಹತ್ತಿ ಹೋರಾಟ ನಡೆಸಿ ದಕ್ಷಿಣ ಭಾರತದಲ್ಲಿ ಬಿಜೆಪಿ ಖಾತೆ ತೆರೆಯಲು ಕಾರಣರಾಗಿದ್ದಾರೆ. ಬಿಜೆಪಿಯಲ್ಲಿರುವ ನನ್ನಂತಹ ಅನೇಕ ಜನರ ರಾಜಕೀಯ ಜೀವನಕ್ಕೆ ಯಡಿಯೂರಪ್ಪ ಕಾರಣ. ಹಾಗಾಗಿ ಅಭಿಮಾನದಿಂದ ಅವರ ಹುಟ್ಟುಹಬ್ಬ ಆಚರಿಸುತ್ತಿದ್ದೇವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿಹೆಬ್ಬಾಕ ಮಾತನಾಡಿ, ಜಿಲ್ಲೆಯಾದಂತ್ಯ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 80ನೇ ಹುಟ್ಟು ಹಬ್ಬವನ್ನು ಬಹಳ ಸಂಭ್ರಮದಿಂದ ಮಾಡುತ್ತಿದ್ದೇವೆ. ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟು ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಯಡಿಯೂರಪ್ಪ ಅವರ ರಾಜಕೀಯ ಕರ್ಮ ಭೂಮಿ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣ ಉದ್ಘಾಟಿಸುವ ಮೂಲಕ ಆಚರಿಸಿದ್ದಾರೆ. ಇದು ನಮಗೆ ಹೆಮ್ಮೆಯ ವಿಷಯ, ಬಿಎಸ್ವೈ ಅವರ ಮಾರ್ಗದರ್ಶನ ಇನ್ನೂ ಹತ್ತಾರು ವರ್ಷಗಳ ಕಾಲ ಪಕ್ಷಕ್ಕೆ ಸಿಗುವಂತಾಗಲಿ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಬೆಳ್ಳಾವೆಯ ಕಾರದ ವೀರಬಸವ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಕೆಲಸ ಶ್ಲಾಘನೀಯ. ರೈತ ನಾಯಕನಾಗಿ ಪಕ್ಷದಲ್ಲಿ ಗುರುತಿಸಿಕೊಂಡು ತಮ್ಮ ವರ್ಚಸ್ಸಿನಿಂದಲೇ ಒಂದೊಂದೇ ಮೆಟ್ಟಿಲು ಹತ್ತಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದವರು. ಇಂತಹ ವ್ಯಕ್ತಿಯ ಜನ್ಮ ದಿನವನ್ನು ನಾವೆಲ್ಲರೂ ಬಹಳ ಖುಷಿಯಿಂದಲೇ ಆಚರಿಸುತ್ತಿದ್ದೇವೆ. ಅವರು ಇನ್ನೂ ಹತ್ತಾರು ವರ್ಷ ಆರೋಗ್ಯದಿಂದ ಬದುಕುವಂತಾಗಲಿ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ ಸಿ ಡಾ.ಹುಲಿನಾಯ್ಕರ್, ಶಿವಪ್ರಸಾದ್, ಕೊಪ್ಪಲ್ ನಾಗರಾಜು, ನಗರ ಮಂಡಲ ಅಧ್ಯಕ್ಷ ಹನುಮಂತರಾಜು, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಸಿ.ಎನ್.ರಮೇಶ್, ವಿಷ್ಣುವರ್ಧನ್, ಮಂಜುನಾಥ್, ಮುಖಂಡರಾದ ಕೆ.ಪಿ.ಮೆಹೇಶ್, ವೇದಮೂರ್ತಿ, ರಾಜೀವ್, ಗಣೇಶ್, ವಿರುಪಾಕ್ಷಪ್ಪ, ಆಟೋ ಯಡಿಯೂರಪ್ಪ, ಕುಮಾರ್, ಸರೋಜಗೌಡ, ರಾಧಮ್ಮ, ಸೌಮ್ಯ, ಲತಾ, ಕಮಲಮ್ಮ, ಜ್ಯೋತಿ, ಹನುಮಂತರಾಯಪ್ಪ, ಬಂಬು ಮೋಹನ್, ನಾಗೇಂದ್ರ ಚನ್ನಬಸಪ್ಪ, ಯಶಸ್, ಟಿ.ಡಿ.ವಿನಯ್ ಇತರರು ಇದ್ದರು.
ಶ್ರೀ ಅಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯ ಬಿಂಬಿಸುವ ವಿಜಯ ರಥಯಾತ್ರೆಗೆ ಚಾಲನೆ ನೀಡಲಾಯಿತು.

Get real time updates directly on you device, subscribe now.

Comments are closed.

error: Content is protected !!