ರಸ್ತೆ ಬದಿಗೆ ಉರುಳಿ ಬಿದ್ದ ಬಸ್

ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

305

Get real time updates directly on you device, subscribe now.


ಶಿರಾ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಅರೇಹಳ್ಳಿ ಗೇಟ್ ಬಳಿ ರಸ್ತೆ ಬದಿ ಉರುಳಿ ಬಿದ್ದು ಸುಮಾರು 25 ರಿಂದ 30 ಜನರಿಗೆ ಗಾಯಗಳಾಗಿರುವ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ನಡೆದಿದೆ.

ಕೆಎಸ್ಆರ್ಟಿಸಿ ಬಸ್ ಶಿರಾ ತಾಲೂಕು ತಾಳಗುಂದ ಗ್ರಾಮದಿಂದ ಶಿರಾ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ತಕ್ಷಣ ಸಾರ್ವಜನಿಕರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇಬ್ಬರಿಂದ ಮೂವರಿಗೆ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ. ಉಳಿದವರನ್ನು ಶಿರಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಆಸ್ಪತ್ರೆಗೆ ಭೇಟಿ: ಕೆಎಸ್ಆರ್ಟಿಸಿ ಬಸ್ ಅಪಘಾತದ ಸುದ್ದಿ ತಿಳಿದ ತಕ್ಷಣ ಶಾಸಕ ಡಾ.ಸಿಎಂ ರಾಜೇಶ್ ಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ. ಹಾಗೂ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ, ತೆಂಗು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಆರ್.ಉಗ್ರೇಶ್ ಅವರು ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!