ತುಮಕೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧ ಬಿಜೆಪಿಯು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದು, ಚುನಾವಣೆಯಲ್ಲಿ ಜನಾಶೀರ್ವಾದ ಪಡೆಯಲು ಕುಣಿಗಲ್ಗೆ ಇದೇ ಮಾರ್ಚ್ 16ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ಮತ್ತು ತುಮಕೂರು ಸಂಘಟನಾತ್ಮಕ ಜಿಲ್ಲೆಯ ಉಪಾಧ್ಯಕ್ಷ ಹಾಗೂ ವಿಜಯ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕ ವೈ.ಹೆಚ್.ಹುಚ್ಚಯ್ಯನವರುಗಳು ತಿಳಿಸಿದ್ದಾರೆ.
ಬಿಜೆಪಿಯ ಅಭಿವೃದ್ಧಿಯ ಮಂತ್ರ ಹಾಗೂ ಕೇಂದ್ರ ಮತ್ತು ರಾಜ್ಯ ಡಬಲ್ ಇಂಜಿನ್ ಸರ್ಕಾರಗಳ ಸಾಧನೆ-ಯೋಜನೆ-ಕಾರ್ಯಕ್ರಮಗಳನ್ನು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿಳಿಸಲಾಗುವುದು. ಅಭಿವೃದ್ಧಿಯ ಕಾರ್ಯಗಳ ಆಧಾರದ ಮೇಲೆ ಜನರ ಬಳಿ ಮತಯಾಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಂಸದ ಪಿ.ಸಿ.ಮೋಹನ್, ಸಚಿವರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಆರ್.ಅಶೋಕ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕುಣಿಗಲ್ ಮಂಡಲ ಅಧ್ಯಕ್ಷ ಕೆ.ಎಸ್.ಬಲರಾಮ್, ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿಯ ರಾಜ್ಯ, ಜಿಲ್ಲೆ, ಮಂಡಲಗಳ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಹಿರಿಯ ಕಾರ್ಯಕರ್ತರು ಕುಣಿಗಲ್ನ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.