ವಿವಿಧ ಕಟ್ಟಡ ಕಾಮಗಾರಿ ಲೋಕಾರ್ಪಣೆ

ಚಿ.ನಾ.ಹಳ್ಳಿಗೆ ಸಿಎಂ ಆಗಮನ ಮಾ.16ಕ್ಕೆ

200

Get real time updates directly on you device, subscribe now.


ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 16, 2023ರಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿವಿಧ ಕಟ್ಟಡ ಕಾಮಗಾರಿಗಳ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರ ಘನ ಉಪಸ್ಥಿತಿಯಲ್ಲಿ ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಆರ್.ಅಶೋಕ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಆಗಮಿಸುವರು.

ಯಾವ ಯಾವ ಕಾಮಗಾರಿಗಳು?
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಅಂದಾಜು 1450ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಸೌಧ ನೂತನ ಕಟ್ಟಡ ಉದ್ಘಾಟನೆ; ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ 27664ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಜೆ.ಸಿ.ಪುರ ಲಿಫ್ಟ್ ಪೇಸ್-01 ಕಾಮಗಾರಿ ಉದ್ಘಾಟನೆ; ಸಾಸಲು ಗ್ರಾಮದಲ್ಲಿ 2600ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ನೂತನ ಕಟ್ಟಡದ ಉದ್ಘಾಟನೆ, ಕಾತ್ರಿಕೆ ಹಾಲ್ನಲ್ಲಿ 2541ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾಗಾಂಧಿ ವಸತಿ ಶಾಲೆ ನೂತನ ಕಟ್ಟಡದ ಉದ್ಘಾಟನೆ, ಹಂದನಕೆರೆಯಲ್ಲಿ 2400ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡದ ಉದ್ಘಾಟನೆ, ಬುಕ್ಕಾಪಟ್ಟಣದಲ್ಲಿ 1900ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡದ ಉದ್ಘಾಟನೆ, ಚಿ.ನಾ.ಹಳ್ಳಿ ಪಟ್ಟಣದಲ್ಲಿ 386ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ; ಹೊಯ್ಸಳಕಟ್ಟೆಯಲ್ಲಿ 198ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ನೂತನ ಕಟ್ಟಡ ಉದ್ಘಾಟನೆ; ಹುಳಿಯಾರ್ನಲ್ಲಿ 250ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ವಿ.ವಿ.ಐ.ಪಿ.ಕೊಠಡಿಯ ಪರಿವೀಕ್ಷಣಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ 250ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಾಗುವುದು.

Get real time updates directly on you device, subscribe now.

Comments are closed.

error: Content is protected !!