ತಿಪಟೂರು, ಚಿ.ನಾ.ಹಳ್ಳಿ, ಗುಬ್ಬಿಗೆ ಜೆ.ಪಿ.ನಡ್ಡಾ ಭೇಟಿ ನಾಳೆ

135

Get real time updates directly on you device, subscribe now.


ತುಮಕೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧ ಬಿಜೆಪಿಯು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದು, ಚುನಾವಣೆಯಲ್ಲಿ ಜನಾಶೀರ್ವಾದ ಪಡೆಯಲು ಇದೇ ಮಾರ್ಚ್ 18ರ ಶನಿವಾರ ತಿಪಟೂರು, ಚಿಕ್ಕನಾಯಕನ ಹಳ್ಳಿ, ಗುಬ್ಬಿ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿದೆ. ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ತಿಪಟೂರು ಮತ್ತು ಚಿಕ್ಕನಾಯಕನ ಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಗುಬ್ಬಿಯ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅಭಿವೃದ್ಧಿಯ ಮಂತ್ರ ಹಾಗೂ ಕೇಂದ್ರ ಮತ್ತು ರಾಜ್ಯ ಡಬ್ಬಲ್ ಇಂಜಿನ್ ಸರ್ಕಾರಗಳ ಸಾಧನೆ ಯೋಜನೆ ಕಾರ್ಯಕ್ರಮಗಳನ್ನು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿಳಿಸಲಾಗುವುದು ಎಂದರು.
ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಬೆಳಗ್ಗೆ 10.30ಕ್ಕೆ ತಿಪಟೂರು ಬಂಡಿಹಳ್ಳಿ ಗೇಟ್, ಎನ್.ಹೆಚ್.ರಸ್ತೆಯಿಂದ ಬೈಕ್ ರ್ಯಾಲಿಯಲ್ಲಿ 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು, ನಂತರ ತಿಪಟೂರು ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ನಂತರ ಚಿಕ್ಕನಾಯಕನ ಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಕೆರೆಯಿಂದ ಮಧ್ಯಾಹ್ನ 01.30ಕ್ಕೆ 6 ಸಾವಿರ ಬೈಕ್ ರ್ಯಾಲಿ ನಡೆಯಲಿದ್ದು, ನಂತರ ಸಾರ್ವಜನಿಕ ಸಭೆ ನಡೆಯಲಿದೆ. ಈ ಎರಡು ಸಭೆಗಳಲ್ಲಿ ಜೆ.ಪಿ.ನಡ್ಡಾ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಅಭಿವೃದ್ಧಿಯ ಕಾರ್ಯಗಳ ಆಧಾರದ ಮೇಲೆ ಜನರ ಬಳಿ ಮತ ಯಾಚನೆ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿಯ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ಡಾ.ರಾಜೇಶ್ಗೌಡ, ಚಿದಾನಂದ ಎಂ.ಗೌಡ, ಪೂರ್ಣಿಮಾ ಶ್ರೀನಿವಾಸ್, ಬಿಜೆಪಿಯ ರಾಜ್ಯ, ಜಿಲ್ಲೆ, ಮಂಡಲಗಳ ಪದಾಧಿಕಾರಿಗಳು, ಮಾಜಿ ಸಚಿವರು ಹಾಗೂ ಶಾಸಕರು, ಚುನಾಯಿತ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಹಿರಿಯ ಕಾರ್ಯಕರ್ತರು ತಿಪಟೂರು ಹಾಗೂ ಚಿಕ್ಕನಾಯಕನ ಹಳ್ಳಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಸಂಜೆ 05 ಗಂಟೆಗೆ ಗುಬ್ಬಿಯ ಶ್ರೀ ನಾಗಲಿಂಗೇಶ್ವರ ದೇವಾಲಯದಿಂದ ಸುಭಾಷ್ ನಗರದವರೆಗೆ ರೋಡ್ ಶೋ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆದು ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರು ಸಭೆಯಲ್ಲಿ ಬಿಎಸ್ವೈ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಸಾಲೆ ಜಯರಾಮ್, ಡಾ.ರಾಜೇಶ್ಗೌಡ, ಚಿದಾನಂದ ಎಂ.ಗೌಡ, ಎ.ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್ ಇತರರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಹೆಚ್.ಟಿ.ಭೈರಪ್ಪ, ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಸಹ ಸಂಚಾಲಕಿ ವಿ.ಸಂಧ್ಯಾಕಿರಣ್, ಜಿಲ್ಲಾ ವಕ್ತಾರ ಕೆ.ಪಿ.ಮಹೇಶ, ಸಹವಕ್ತಾರ ಟಿ.ಜೆ.ಸನತ್, ಮಾಧ್ಯಮ ಜಿಲ್ಲಾ ಸಂಚಾಲಕ ಟಿ.ಆರ್.ಸದಾಶಿವಯ್ಯ, ಸಹ ಸಂಚಾಲಕ ಜೆ.ಜಗದೀಶ್ ಇದ್ದರು.

Get real time updates directly on you device, subscribe now.

Comments are closed.

error: Content is protected !!