ಮೋರಿಯಲ್ಲಿ ಮಹಿಳೆಯ ಶವ ಪತ್ತೆ

218

Get real time updates directly on you device, subscribe now.


ತುಮಕೂರು: ನಗರದ ಸಿದ್ದರಾಮೇಶ್ವರ ಬಡಾವಣೆ ಶಾಂತಿನಿಕೇತನ ರಸ್ತೆಯ ದೊಡ್ಡ ಮೋರಿಯಲ್ಲಿ ಮಹಿಳೆ (44) ಶವ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ.

ಮೋರಿಯಲ್ಲಿ ಮಹಿಳೆಯ ಶವ ಬೆತ್ತಲಾಗಿ ಕಂಡುಬಂದಿದ್ದು, ಮಹಿಳೆಯು ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ಶವ ಮೋರಿಯಲ್ಲಿ ಪತ್ತೆಯಾಗುವ ಮೂಲಕ ಸಂಶಯ ಹುಟ್ಟಿಸಿದ್ದು ಗುರುವಾರ ರಾತ್ರಿ ಸುರಿದ ಮಳೆಗೆ ಒಂದಷ್ಟು ದೂರದಿಂದ ಶವ ಕೊಚ್ಚಿ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೆ ಯಾರೋ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ ಶವವನ್ನು ಚರಂಡಿಗೆ ಎಸೆದು ಹೋಗಿದ್ದಾರೆ. ಜಯನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳ ಮಹಜರ್ ನಡೆಸಿ ತನಿಖೆ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!