ತುಮಕೂರು: ಬೇಸಿಗೆ ಆರಂಭವಾಗಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ನಗರದ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ಸಾಧಾರಣ ಮಳೆ ಸುರಿದು ತಂಪೆರೆಯಿತು.
ಹಲವು ದಿನಗಳಿಂದ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಿದೆ. ಗುರುವಾರ ಸಂಜೆಯಿಂದ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿತು. ಸಂಜೆಯೇ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಶುರುವಾಗಿತ್ತು. ರಾತ್ರಿ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ನಗರದ ಬಹುತೇಕ ಕಡೆ ಮಳೆ ಆಗಿದೆ. ಬಿಸಿಲಿನ ಪ್ರಮಾಣ ಹೆಚ್ಚಿರಲಿದ್ದು, ಇಂದು ಸಹ ನಗರದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿಸಿಲಿನ ಧಗೆ: ತಂಪೆರದ ಮಳೆ
Get real time updates directly on you device, subscribe now.
Prev Post
Next Post
Comments are closed.