ತುಮಕೂರು:ತುಮಕೂರು ವಿಶ್ವವಿದ್ಯಾನಿಲಯ ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಪೈಪೋಟಿ ನೀಡುವಷ್ಟು ಕ್ಷಮತೆ ಬೆಳೆಸಿಕೊಂಡಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ. ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ವಿದ್ಯುನ್ಮಾನ ಶಾಸ್ತ್ರವಿಭಾಗ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡೇಟಾ ಸೈನ್ಸ್, ಕಮ್ಯೂನಿಕೇಶನ್ ಟೆಕ್ನಾಲಜಿ ಮತ್ತು ಬಯೋಇನ್ಫಾರ್ಮ್ಯಾಟಿಕ್ಸ್ (ಐಸಿಡಿಸಿಬಿ-2023) ವಿಷಯದ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಅಭ್ಯರ್ಥಿಗಳೆಲ್ಲರೂ ಎರಡು ದಿನಗಳ ಕಾಲ ಸಂಪೂರ್ಣ ಏಕಾಗ್ರತೆಯಿಂದ ಸಮ್ಮೇಳನದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಕಾಶ್ ಎಂ.ಶೇಠ್, ನಮ್ಮಕಾಲೇಜಿನಲ್ಲಿ ಅಂತರರಾಷ್ಟ್ರೀಯ ಕಾರ್ಯಾಗಾರವನ್ನು ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ. ರಾಜ್ಯ, ಹೊರ ರಾಜ್ಯ ಹಾಗೂ ವಿದೇಶದಿಂದ ಬಂದಿರುವ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ವಿಚಾರ ಮಂಡನೆ ಮಾಡಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ತುಮಕೂರು ವಿವಿ ವಿಜ್ಞಾನ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥೆ ಡಾ.ರಮಣಿ ಆರ್., ಪ್ರಾಧ್ಯಾಪಕ ಡಾ.ಮುಕುಂದಪ್ಪ ಬಿ.ಎಲ್., ವಿದ್ಯುನ್ಮಾನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ್ ಡಿ., ಜೈವಿಕತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಪೂರ್ಣಿಮ ಡಿ., ಬೆಂಗಳೂರು ವಿವಿಯ ವಿದ್ಯುನ್ಮಾನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವರಾಜು ಜೆ. ಟಿ., ಕ್ಯಾಲಿಕಟ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ರವೀಂದ್ರಕುಮಾರ್ ಭಾಗವಹಿಸಿದ್ದರು.
Comments are closed.