ತಿಗಳ ಸಮುದಾಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಿ

75

Get real time updates directly on you device, subscribe now.


ತುಮಕೂರು: ಅಗ್ನಿ ವಂಶ ಕ್ಷತ್ರಿಯ ಜನಾಂಗದವರು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಶಿಕ್ಷಣ ಸಂಸ್ಥೆ ಕಟ್ಟುವಂತಾಗಲಿ, ಯಾವುದೇ ಸಮುದಾಯದ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದಲ್ಲಿ ಆ ಕುಟುಂಬ ಸಮಾಜದಲ್ಲಿ ಹೆಚ್ಚಿನ ಗೌರವ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಗ್ನಿ ವಂಶ ಕ್ಷತ್ರಿಯ ತಿಗಳ ಜನಾಂಗದ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಅಮಾನಿಕೆರೆ ಗಾಜಿನಮನೆ ಆವರಣದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಶರೀರವನ್ನು ಧಣಿಸಿ ದುಡಿದು ಪ್ರಾಮಾಣಿಕ ಜೀವನ ನಡೆಸುವ ಸಮುದಾಯ ತಿಗಳ ಸಮುದಾಯವಾಗಿದೆ. ಈ ವರ್ಗದ ಜನರು ಹೆಚ್ಚಾಗಿ ರೈತಾಪಿ ಕುಟುಂಬದವರಾಗಿದ್ದಾರೆ. ಸಮುದಾಯದ ಜನರು ರಾಜಕೀಯವಾಗಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿ ಸೇವೆ ಮಾಡಿದ್ದಿರಾ, ಮುಂದಿನ ದಿನಗಳಲ್ಲಿ ವಿಧಾನಸಭೆ, ಲೋಕಸಭೆಗಳಿಗೆ ಆಯ್ಕೆಯಾಗುವುದರ ಮೂಲಕ ಸಮಾಜದ ಪರವಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದರು.

ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ನಾನು ಈ ದೇಶದ ಪ್ರಜೆ ಎಂಬ ಭಾವನೆ ಬರಬೇಕು ಹಾಗೂ ನಾವೆಲ್ಲಾ ಹಿಂದು ನಾವೆಲ್ಲಾ ಒಂದು ಎಂಬ ಭಾವನೆ ಮೂಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಬಿ.ಜ್ಯೋತಿಗಣೇಶ್ ಮಾತನಾಡಿ, ರಾಜ್ಯ ಸರ್ಕಾರ ಈ ಸಮುದಾಯದ ಅಭಿವೃದ್ಧಿಗಾಗಿ ತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಅಗ್ನಿ ವಂಶ ಕ್ಷತ್ರಿಯ ಜನಾಂಗದ ಕುಲದೇವರಾದ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವಂತೆ ನಮ್ಮ ಸರ್ಕಾರ ಆದೇಶ ಮಾಡಿದೆ ಎಂದರು.

ಸಮುದಾಯದ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಗಾಗಲೆ ಈಡೇರಿಸಿದೆ. ಅಭಿವೃದ್ಧಿ ನಿಗಮದಿಂದ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಮಾಜಿ ಶಾಸಕ ಸುರೇಶ್ಗೌಡ, ಉಪ ಮಹಾಪೌರ ಟಿ.ಕೆ.ನರಸಿಂಹಮೂರ್ತಿ, ಅಗ್ನಿ ವಂಶ ಸಮಾಜದ ಅಧ್ಯಕ್ಷ ಸುಬ್ಬಣ್ಣ, ಉದಯ್ಸಿಂಗ್, ಪೇಟೆ ಯಜಮಾನರಾದ ಶಿವಕುಮಾರ್, ಹನುಮಂತರಾಜು, ನಿವೃತ್ತ ಪ್ರಾಂಶುಪಾಲ ಎಂ.ಆಂಜನೇಯ, ಗೋವಿಂದರಾಜು, ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಬಸವರಾಜು, ರವೀಶ್, ಲಕ್ಷ್ಮೀಶ್ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!