ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ್ರೆ ಕ್ರಮ

ಅನುಮತಿ ಇಲ್ಲದೆ ಜಾಹಿರಾತು ಪ್ರಕಟಿಸುವಂತಿಲ್ಲ: ಜಿಲ್ಲಾಧಿಕಾರಿ

79

Get real time updates directly on you device, subscribe now.


ತುಮಕೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದ್ದಾರೆ.

ಕರ್ನಾಟಕ ಓಪನ್ ಪ್ಲೇಸಸ್ ಪ್ರಿವೆನ್ಶನ್ ಆಫ್ ಡಿಸ್ಫಿಗರ್ಮೆಂಟ್ ಕಾಯ್ದೆ 3, 4, 5, 6 ಮತ್ತು 8 ರನ್ವಯ ಯಾವುದೇ ವ್ಯಕ್ತಿ ಅಥವಾ ಮತ್ತೊಬ್ಬ ವ್ಯಕ್ತಿ ಮೂಲಕ ಸ್ಥಳೀಯ ಆಡಳಿತದ ಲಿಖಿತ ಅನುಮತಿಯಿಲ್ಲದೆ ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಸ್ಥಳಗಳಲ್ಲಿ ಯಾವುದೇ ಜಾಹೀರಾತನ್ನು ಅಂಟಿಸಿದರೆ ಅಥವಾ ನಿರ್ಮಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಭಾರತ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಸ್ಥಳೀಯ ಆಡಳಿತದ ಲಿಖಿತ ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಯಾವುದೇ ಸ್ಥಳದಲ್ಲಿ ಯಾವುದೇ ಜಾಹೀರಾತನ್ನು ಸಾರ್ವಜನಿಕ ವೀಕ್ಷಣೆಗೆ ಪ್ರಚುರಪಡಿಸುವುದನ್ನು ನಿಷೇಧಿಸಲಾಗಿದ್ದು, ಈ ನಿಷೇಧವನ್ನು ವಿರೋಧಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ಚುನಾವಣಾ ಪ್ರಚಾರ ಸಮಯದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಪ್ರಚಾರಕ್ಕಾಗಿ ಸಾರ್ವಜನಿಕ, ಖಾಸಗಿ ಕಟ್ಟಡ, ತೆರೆದ ಸ್ಥಳ, ಗೋಡೆಗಳ ಮೇಲೆ ಅನಿಯಂತ್ರಿತವಾಗಿ ಬರೆದ ಪೋಸ್ಟರ್, ಜಾಹೀರಾತು ಅಂಟಿಸಿ ವಿರೂಪಗೊಳಿಸುವುದು ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಸಾರ್ವಜನಿಕ ಆಸ್ತಿಗೆ ಹಾನಿ ಉಂಟಾಗುವುದಲ್ಲದೆ ಕಟ್ಟಡದ ಸೌಂದರ್ಯ ಹಾಳಾಗಿ ಜನರಿಗೆ ತೊಂದರೆ ಉಂಟಾಗುತ್ತದೆ ಎಂದು ಮನಗಂಡ ಆಯೋಗ ಈ ನಿದೇರ್ಶನ ನೀಡಿದೆ.

ಚುನಾವಣಾ ಆಯೋಗದ ನಿಷೇಧ ಆದೇಶ ಉಲ್ಲಂಸಿದವರಿಗೆ 6 ತಿಂಗಳವರೆಗೆ ವಿಸ್ತರಿಸಬಹುದಾದ ಸೆರೆವಾಸ ಅಥವಾ 1000 ರೂ. ಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು, ವಿರೂಪಗೊಳಿಸುವಿಕೆಯಿಂದ ಯಾವುದೇ ವ್ಯಕ್ತಿಗೆ ಅಡಚಣೆ, ಕಿರಿಕಿರಿ ಅಥವಾ ಹಾನಿ ಉಂಟು ಮಾಡಿದರೆ ಅಪರಾಧವೆಂದು ಪರಿಗಣಿಸಲಾಗುವುದು. ಅಲ್ಲದೆ ವಿರೂಪಗಳಿಸುವಿಕೆಯ ಮರು ಸ್ಥಾಪನೆಯ ಸಂಪೂರ್ಣ ವೆಚ್ಚವನ್ನು ಅಪರಾಧಿಯಿಂದ ವಸೂಲಿ ಮಾಡಲಾಗುವುದು. ಈ ಆದೇಶವು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಜಾರಿಯಲ್ಲಿರುತ್ತದೆ ಅಂದು ಎಚ್ಚರಿಕೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!