ಗುಬ್ಬಿ: ಕಳೆದ ಬಾರಿಯ ವಿಧಾನಸಭಾ ಚುನಾವಣೆ ಗಮನಿಸಿದರೆ ಮತದಾನದ ಪ್ರಮಾಣವು ನಿರೀಕ್ಷಿತ ಮಟ್ಟದಲ್ಲಿ ಆಗಿರುವುದಿಲ್ಲ. ಹಾಗಾಗಿ ಈ ಬಾರಿ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ಈ ಬೈಕ್ ಜಾಥಾ ಆಯೋಜಿಸಲಾಗಿದೆ ಎಂದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಕುಮಾರ್ ತಿಳಿಸಿದರು.
ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯಿತಿ ಗುಬ್ಬಿ ರವರ ನೇತೃತ್ವದಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಬೈಕ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುಬ್ಬಿ ತಾಲೂಕು ಪಂಚಾಯಿತಿಯಿಂದ ಆರಂಭವಾದ ಬೈಕ್ ಜಾಥ ಯು ಗೋಸಲ ಚನ್ನಬಸವೇಶ್ವರ ಸ್ವಾಮಿ ದೇವಸ್ಥಾನದ ಮಾರ್ಗವಾಗಿ ಬಿದರೆ ಹಾಗೂ ಇರಕಸಂದ್ರ ಗ್ರಾಮ ಪಂಚಾಯಿತಿಗಳ ಮೂಲಕ ಚೇಳೂರು ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಸಾಗಿ ಎಪಿಎಂಸಿ ಆವರಣದಲ್ಲಿ ಬೈಕ್ ಜಾಥಾ ಕಾರ್ಯಕ್ರಮ ಮುಕ್ತಾಯ ಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ ಶೇಕಡ 100 ರಷ್ಟು ಮತದಾನ ಆಗಬೇಕು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ವ್ಯಾಪಕ ಪ್ರಚಾರ ನೀಡುವುದರ ಮೂಲಕ ಮತದಾರರಿಗೆ ಜಾಗೃತಿ ಮೂಡಿಸುವಂತೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿಯ ಎಲ್ಲಾ ಹಳ್ಳಿಗಳಲ್ಲಿಯೂ ಸಹ ಸ್ವಚ್ಛ ವಾಹಿನಿ ವಾಹನದ ಮೂಲಕ ಮತದಾರರ ಜಾಗೃತಿ, ಕಾರ್ಯಕ್ರಮವನ್ನು ಪ್ರತಿನಿತ್ಯ ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಮತದಾನದ ಕುರಿತು ಹೆಚ್ಚಿನ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ ಮಾತನಾಡಿ ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಮತ ಚಲಾವಣೆ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹ ಹೆಚ್ಚು ಶ್ರಮವಹಿಸಿ ಕೆಲಸ ನಿರ್ವಹಿಸುವಂತೆ ನೆರೆದಿದ್ದ ಅಧಿಕಾರಿಗಳಿಗೆ ಮನವಿ ಮಾಡಿದರು.
ಗುಬ್ಬಿ ತಾಲೂಕಿನ ಸ್ವೀಪ್ ನೋಡಲ್ ಅಧಿಕಾರಿ ಸುಮನಾ, ತುಮಕೂರು ಜಿಲ್ಲಾ ಪಂಚಾಯಿತಿ ಸ್ವೀಪ್ ಸಮಿತಿ ಸಹಾಯಕ ನೋಡಲ್ ಅಧಿಕಾರಿ ಶ್ರೀನಿವಾಸ್, ಸಹಾಯಕ ನಿರ್ದೇಶಕ ಇಂದ್ರೇಶ್.ಜೆ.ಹೆಚ್, ಸಹಾಯಕ ಲೆಕ್ಕಾಧಿಕಾರಿ ಶೋಭಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಮತ್ತು ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.
Comments are closed.