ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಚಿಕ್ಕಕುನ್ನಾಲ ಗ್ರಾಮದ ಯಾಸ್ಮಿನ್ ತಾಜ್ ಎಂಬ ರೈತ ಮಹಿಳೆಗೆ ಸೇರಿದ ರೊಪ್ಪಕ್ಕೆ ನುಗ್ಗಿ 8 ಮೇಕೆಗಳ ಕತ್ತುಸೀಳಿ ಸಾಯಿಸಿ 4 ಮೇಕೆಗಳನ್ನು ಹೊತ್ತೊಯ್ದಿದೆ.
ಮೇಕೆ ಸಾಕಾಣಿಕೆಯಿಂದಲೇ ಬದುಕು ಕಟ್ಟಿಕೊಂಡ ಈ ರೈತ ಕುಟುಂಬ ಈ ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿದೆ. ಇತ್ತೀಚೆಗೆ ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ತೋಟಗಳಿಗೆ ಹೋಗಿ ಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಜಾನುವಾರುಗಳನ್ನು ಕಾಪಾಡಿಕೊಳ್ಳುವುದೇ ಕಷ್ಟಕರವಾಗುತ್ತಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಚಿರತೆ ಸಾಯಿಸಿರುವ ಮೇಕೆಗಳ ಮರಣೋತ್ತರ ಪರೀಕ್ಷೆ ನಡೆಸಿ ಸರ್ಕಾರದಿಂದ ಸಾಧ್ಯವಿರುವ ಪರಿಹಾರ ಕೊಡಿಸಲಾಗುವುದು ಎಂದು ಅರಣ್ಯ ಉಪ ಸಂರಕ್ಷಣಾಧಿಕಾರಿ ಸೋಮಶೇಖರ್ ತಿಳಿಸಿದರು.
Comments are closed.