ಬಿಜೆಪಿಗೆ ರಾಜಿನಾಮೆ ನೀಡಿದ ಸೊಗಡು ಶಿವಣ್ಣ

ಪಕ್ಷವೋ, ಪಕ್ಷಾಂತರವೋ.. ಚುನಾವಣೆಗೆ ನಿಲ್ಲುವುದು ಖಚಿತ

82

Get real time updates directly on you device, subscribe now.


ತುಮಕೂರು: ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಾನು ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ರಾಜ್ಯಾಧ್ಯಕ್ಷರಿಗೆ ಕಳಿಸಿದ್ದೇನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಾಳು ಮಾಡಿ ಬಿಜೆಪಿ ಹಾಳು ಮಾಡುತ್ತಿರುವ ಸಂಸದ ಜಿ.ಎಸ್.ಬಸವರಾಜು, ಗ್ರಾಮಾಂತರದ ಮಾಜಿ ಶಾಸಕ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿ ನನಗೆ ಟಿಕೆಟ್ ತಪ್ಪಿಸಲು ಕುತಂತ್ರ ಮಾಡಿದರು ಎಂದು ಕಿಡಿಕಾರಿದರು.

ನಾನು ಗೆದ್ದರೆ ಮಂತ್ರಿಯಾಗುವೆ. ಶಿವಣ್ಣ ಇದ್ದರೆ ನಾನು ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಅರಿತು ಸುರೇಶ್ ಗೌಡ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಂಸದ ಜಿ.ಎಸ್.ಬಸವರಾಜು ಸಚಿವ ಮಾಧುಸ್ವಾಮಿ ಅವರನ್ನು ಸೋಲಿಸಲು ಕೆ.ಎಸ್.ಕಿರಣ್ ಕುಮಾರ್ ಅವರನ್ನು ಕಾಂಗ್ರೆಸ್ ಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.

ಇವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಬೀದಿಗೆ ಬೀಳುವಂತಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಹಾಳು ಮಾಡಲು ಒಬ್ಬರ ಮೇಲೆ ಒಬ್ಬರನ್ನು ಎತ್ತಿ ಕಟ್ಟುತ್ತಿದ್ದಾರೆ. ಬಿಜೆಪಿಗೆ ಬಂದವರು ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಹೊರ ದಬ್ಬಿ, ದೇವಸ್ಥಾನದಲ್ಲಿ ಕೂತು ವ್ಯವಹಾರ ಮಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿಕೊಂಡು ಕಣ್ಣು ಮುಚ್ಚಿ ಕುಳಿತುಕೊಳ್ಳಲು ಆಗುವುದಿಲ್ಲ, ಹೋರಾಟಕ್ಕಾಗಿ ಹುಟ್ಟಿದ್ದೇನೆ. ಹೋರಾಟ ಮಾಡುತ್ತೇನೆ ಎಂದರು.

ಚುನಾವಣೆಗೆ ಸ್ಪರ್ಧಿಸುವುದು ಖಚಿತ, ಅದು ಪಕ್ಷೇತರರಾಗಿಯೋ ಅಥವಾ ಯಾವುದಾದರೂ ಪಕ್ಷ ಸೇರ್ಪಡೆಯಾಗಿ ಸ್ಪರ್ಧಿಸುವುದೋ ಎಂಬುದನ್ನು ಒಂದೆರಡು ದಿನದಲ್ಲಿ ನನ್ನ ಅಭಿಮಾನಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ನನಗೆ ಭ್ರಷ್ಟಚಾರ, ಸ್ವಜನ ಪಕ್ಷಪಾತ ತಿಳಿದಿಲ್ಲ. ನನಗೆ ಯಾವುದೇ ಜಾತಿ ಇಲ್ಲ. ಇದರಿಂದ ನನ್ನನ್ನು ಎಲ್ಲರೂ ಪ್ರೀತಿಸುತ್ತಾರೆ. ಈ ಹಿನ್ನಲೆಯಲ್ಲಿ ನಾನು ಚುನಾವಣೆಗೆ ನಿಲ್ಲುವುದು ಖಚಿತ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಯಸಿಂಹರಾವ್, ಪುಟ್ಟಸ್ವಾಮಿ, ಧನಿಯಾಕುಮಾರ್, ಶಾಂತರಾಜು, ಚೌಡೇಶ್, ಶಬ್ಬೀರ್ ಅಹ್ಮದ್, ನರಸಿಂಹಯ್ಯ, ರಾಜಕುಮಾರ್ ಮುಂತಾದವರಿದ್ದರು.

Get real time updates directly on you device, subscribe now.

Comments are closed.

error: Content is protected !!