ಜಿಲ್ಲೆಯಲ್ಲಿ ಶನಿವಾರ 11 ನಾಮಪತ್ರ ಸಲ್ಲಿಕೆ

180

Get real time updates directly on you device, subscribe now.

ತುಮಕೂರು: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 15 ರಂದು 11 ನಾಮಪತ್ರ ಸ್ವೀಕೃತಗೊಂಡಿವೆ.
ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಜನತಾದಳ (ಜಾತ್ಯಾತೀತ) ಪಕ್ಷದಿಂದ ಸಿ.ಬಿ. ಸುರೇಶ್ಬಾಬು 1 ನಾಮಪತ್ರ ಸಲ್ಲಿಸಿದರು. ತಿಪಟೂರು ಕ್ಷೇತ್ರಕ್ಕೆ ಜನತಾದಳ (ಜಾತ್ಯಾತೀತ) ಪಕ್ಷದಿಂದ ಕೆ.ಟಿ.ಶಾಂತಕುಮಾರ್ 1 ನಾಮಪತ್ರ ಸಲ್ಲಿಸಿದರು. ತುರುವೇಕೆರೆ ಕ್ಷೇತ್ರಕ್ಕೆ ಜನತಾದಳ ಜಾತ್ಯಾತೀತದಿಂದ ಎಂ.ಟಿ.ಕೃಷ್ಣಪ್ಪ 1 ನಾಮಪತ್ರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಮ್ ಪ್ರಸಾದ್ 2 ನಾಮಪತ್ರ ಸಲ್ಲಿಸಿದರು.

ತುಮಕೂರು ನಗರ ಕ್ಷೇತ್ರಕ್ಕೆ ಸೋಷಿಯಾಲಿಸ್ಟಿಕ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ದಿಂದ ಎಂ.ವಿ.ಕಲ್ಯಾಣಿ 1 ನಾಮಪತ್ರ ಸಲ್ಲಿಸಿದರೆ, ಕೊರಟಗೆರೆ ಕ್ಷೇತ್ರಕ್ಕೆ ಜನತಾದಳ (ಜಾತ್ಯಾತೀತ) ಪಕ್ಷದಿಂದ ಪಿ.ಆರ್.ಸುಧಾಕರಲಾಲ್ 1 ನಾಮಪತ್ರ, ಉತ್ತಮ ಪ್ರಜಾಕೀಯ ಪಕ್ಷದಿಂದ ನಾಗೇಂದ್ರ ಟಿ.ಎನ್. 1 ನಾಮಪತ್ರ ಸಲ್ಲಿಸಿದ್ದಾರೆ.
ಗುಬ್ಬಿ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರವೀಣ್.ಎಸ್.ಆರ್. 1 ನಾಮಪತ್ರ,ಶಿರಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ರಂಗನಾಥ 1 ನಾಮಪತ್ರ, ಆಮ್ ಆದ್ಮಿ ಪಕ್ಷದಿಂದ ಶಶಿಕುಮಾರ್.ಆರ್. 1 ನಾಮಪತ್ರ ಸಲ್ಲಿಸಿದ್ದು, ಒಟ್ಟಾರೆ ಜನತಾದಳ (ಜಾತ್ಯಾತೀತ) ಪಕ್ಷದಿಂದ 4, ಆಮ್ ಆದ್ಮಿ ಪಕ್ಷದಿಂದ 1, ಸ್ವತಂತ್ರ 1 ಮತ್ತು ಇತರೆ ಪಕ್ಷಗಳಿಂದ 5 ನಾಮಪತ್ರ ಸ್ವೀಕೃತವಾಗಿವೆ.

Get real time updates directly on you device, subscribe now.

Comments are closed.

error: Content is protected !!