ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕೊರಟಗೆರೆ ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ಏಪ್ರಿಲ್ 15 ರಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 9,44,270 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 15ರಂದು ಕೆಎ-02-ಎಇ-150 ವಾಹನ ನಿಲ್ಲಿಸಿ ತಪಾಸಣೆ ನಡೆಸಿದಾಗ 1,94,270 ರೂ. ನಗದು ದೊರೆತಿದ್ದು, ವಾಹನದಲ್ಲಿದ್ದ ಮರೇಗೌಡ ಬಿನ್ ರಾಮೇಗೌಡ ಅವರನ್ನು ವಿಚಾರಿಸಿದಾಗ ಸಮಂಜಸವಾದ ಉತ್ತರ ನೀಡದೆ ಇರುವುದರಿಂದ ನಿಯೋಜಿತ ಪೊಲೀಸ್ ಅಧಿಕಾರಿಗಳು ಹಣ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಅದೇ ರೀತಿ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮುದ್ದೇನಹಳ್ಳಿ ಚೆಕ್ಪೋಸ್ಟ್ ಬಳಿ ಚಿತ್ತಗುಂಟ ವೇಣುಗೋಪಾಲ ರೆಡ್ಡಿ ಬಿನ್ ವೆಂಕಟರೆಡ್ಡಿ ಎಂಬುವವರ ವಾಹನ ತಪಾಸಣೆ ನಡೆಸಿದಾಗ 7,50,000 ರೂ. ದಾಖಲೆ ಇಲ್ಲದೆ ಅಕ್ರಮವಾಗಿ ಹೊಂದಿರುವುದು ಕಂಡು ಬಂದಿದ್ದರಿಂದ ಅನುಮಾನದ ಮೇರೆಗೆ ಸದರಿ ವಾಹನ ಮತ್ತು ಹಣ ಪೊಲೀಸ್ ಠಾಣೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
9.44ಲಕ್ಷ ರೂ. ಅಕ್ರಮ ನಗದು ವಶ
Get real time updates directly on you device, subscribe now.
Comments are closed.