ಗೋವಿಂದರಾಜು ನಾಮಪತ್ರ ಸಲ್ಲಿಕೆ

96

Get real time updates directly on you device, subscribe now.


ತುಮಕೂರು: 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಎನ್.ಗೋವಿಂದರಾಜು ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಹಲವಾರು ಹಿತೈಷಿಗಳು ಮತ್ತು ಸ್ನೇಹಿತರು ಸೋಮವಾರ ಶುಭ ದಿನವಿರುವುದರ ಪ್ರಯುಕ್ತ ನಾಮಪತ್ರ ಸಲ್ಲಿಸಿ ಎಂದು ಕಿವಿಮಾತು ಹೇಳಿದ್ದರು, ಹಾಗಾಗಿ ಸೋಮವಾರ ಆತುರವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಏ.19 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಮಗ, ಸೊಸೆ, ಮೊಮ್ಮಗು ಹಾಗೂ ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್ ರಾಜು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!