ಶಿರಾ ಕೋಟೆ ಮೇಲೆ ಕೇಸರಿ ಬಾವುಟ ಹಾರುತ್ತೆ

84

Get real time updates directly on you device, subscribe now.


ಶಿರಾ: 2023ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಕೇಸರಿ ಬಾವುಟವನ್ನು ಶಿರಾ ಕೋಟೆಯ ಮೇಲೆ ಹಾರಿಸುತ್ತೇವೆ ಎಂದು ಶಾಸಕ ಡಾ.ಎಂ.ರಾಜೇಶ್ ಗೌಡ ಹೇಳಿದರು.
ನಗರದಲ್ಲಿ ಬೃಹತ್ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಶ್ರೀಗವಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮಿನಿ ವಿಧಾನಸೌಧದ ವರೆಗೆ ಅದ್ದೂರಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿ ಮಾತನಾಡಿ, ಕಳೆದ ಎರಡುವರೆ ವರ್ಷಗಳಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕೊಟ್ಟ ಕೊಡುಗೆ ಹಾಗೂ ಶಿರಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಕ್ಷೇತ್ರದ ಜನತೆ ಅಭೂತ ಪೂರ್ವ ಬೆಂಬಲ ನೀಡುತ್ತಿದ್ದು, ಇಂದು ಸೇರಿರುವ ಜನಸ್ತೋಮ ನೋಡಿದ ಮೇಲೆ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ಮೂರು ಬಾರಿ ಹೇಮಾವತಿ ನೀರು ಹರಿಸಿ ಶಿರಾ ತಾಲೂಕಿನ ಕುಡಿಯುವ ನೀರಿನ ಬವಣೆ ಶಾಶ್ವತವಾಗಿ ನಿರ್ಮೂಲನೆ ಮಾಡಿದೆ ಎಂದರು.

ಪ್ರತಿ ಗ್ರಾಮಗಳಿಗೂ ಖುದ್ದು ಭೇಟಿ ನೀಡಿ ಜನರ ನಾಡಿಮಿಡಿತ ಅರಿತು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಸಾಮಾಜಿಕ ನ್ಯಾಯದ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ನನ್ನ ಅಭಿವೃದ್ಧಿ ಕಾರ್ಯಗಳ ಸಾಧನೆ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮತದಾರರೂ ಸಹ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ ಎಂದರು.
ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಉಪ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದ್ದಾರೆ, ಆದ್ದರಿಂದ ಶಿರಾ ಕ್ಷೇತ್ರದ ಮತದಾರರು ಉಪ ಚುನಾವಣೆಯಲ್ಲಿ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಗೆಲ್ಲಿಸಿದಂತೆ 2023ರ ಚುನಾವಣೆಯಲ್ಲಿಯೂ ಅತಿ ಹೆಚ್ಚು ಮತ ನೀಡಿ ವಿಜಯಶಾಲಿಯನ್ನಾಗಿ ಮಾಡಬೇಕು ಎಂದರು.
ತೆಂಗು ನಿಗಮದ ಮಾಜಿ ಅಧ್ಯಕ್ಷರು ಹಾಗೂ ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ ಶಿರಾ ಕ್ಷೇತ್ರದ ಎಲ್ಲಾ ಮತಬಾಂಧವರು ಡಾ.ಸಿಂ.ರಾಜೇಶ್ ಗೌಡ ಅವರಿಗೆ ಹೆಚ್ಚಿನ ಮತ ನೀಡಿ ಕರ್ನಾಟಕ ರಾಜ್ಯದಲ್ಲಿ ಶಿರಾ ವಿಧಾನಸಭಾ ಕ್ಷೇತ್ರ ಮೊದಲ ಗೆಲುವು ಸಾಧಿಸುವಂತೆ ಮಾಡಬೇಕು ಎಂದರು.

ಡಾ.ಸಿ.ಎಂ.ರಾಜೇಶ್ ಗೌಡ ಅವರ ಪತ್ನಿ ಡಾ.ತೇಜಶ್ವಿನಿ ರಾಜೇಶ್ ಗೌಡ ಮಾತನಾಡಿ ಅಭಿವೃದ್ಧಿ ಕಾರ್ಯಗಳಲ್ಲಿ ಡಾ.ರಾಜೇಶ್ ಗೌಡ ಅವರ ಬದ್ಧತೆಯಿಂದ ಕಾರ್ಯ ಮಾಡುತ್ತಾರೆ. ಯಾವುದೇ ಕೆಲಸ ಆಗಬೇಕೆಂದರೆ ಛಲ ಬಿಡದೆ ಕೆಲಸ ಮಾಡುತ್ತಾರೆ. ಆದ್ದರಿಂದ ಶಿರಾ ಕ್ಷೇತ್ರದ ಸರ್ವಾಂಗೀರ್ಣ ಅಭಿವೃದ್ಧಿಗೆ ಎಲ್ಲಾ ಮತದಾರರು ಡಾ.ರಾಜೇಶ್ ಗೌಡ ಅವರನ್ನು ಗೆಲ್ಲಿಸಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಮಾಜಿ ಸದಸ್ಯ ಹುಲಿನಾಯ್ಕರ್, ಟಿಎಪಿಎಂಎಸ್ ಅಧ್ಯಕ್ಷ ಹುಣಸೆಹಳ್ಳಿ ಶಿವಕುಮಾರ್, ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್, ಗ್ರಾಮಾಂತರ ಅಧ್ಯಕ್ಷ ರಂಗಸ್ವಾಮಿ, ನಗರಸಭೆ ಸದಸ್ಯರಾದ ರಂಗರಾಜು, ಉಮಾ ವಿಜಯರಾಜ್, ಮಾಜಿ ಸದಸ್ಯ ಪ್ರಕಾಶ್ ಮುದ್ದುರಾಜ್, ಡಾ.ಬಿ.ಗೋವಿಂದಪ್ಪ, ತರೂರು ಬಸವರಾಜು, ನಗರ ಬಿಜೆಪಿ ಉಪಾಧ್ಯಕ್ಷ ಗಿರಿಧರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹನುಮಂತ ನಾಯ್ಕ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!