ತುಮಕೂರು ಜಿಲ್ಲೆಗೆ 23ನೇ ಸ್ಥಾನ

88

Get real time updates directly on you device, subscribe now.


ತುಮಕೂರು: ಕಳೆದ ಮಾರ್ಚ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಹೊಸದಾಗಿ ಪರೀಕ್ಷೆ ಬರೆದ 23,023 ವಿದ್ಯಾರ್ಥಿಗಳ ಪೈಕಿ 17,153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ಜಿಲ್ಲೆಗೆ ಶೇ.74.5ರಷ್ಟು ಫಲಿತಾಂಶ ಲಭಿಸಿ ರಾಜ್ಯದಲ್ಲಿ 23ನೇ ಸ್ಥಾನದಲ್ಲಿದೆ.

ಕಳೆದ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.58.4 ರಷ್ಟು ಫಲಿತಾಂಶ ದೊರೆತಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ತಿಳಿಸಿದ್ದಾರೆ.
ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆ ಬರೆದ 26,456 (ಬಾಲಕರು- 12,047, ಬಾಲಕಿಯರು- 14,409) ವಿದ್ಯಾರ್ಥಿಗಳ ಪೈಕಿ 18,774 (ಬಾಲಕರು- 7,995, ಬಾಲಕಿಯರು- 10,779) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 5491 ವಿದ್ಯಾರ್ಥಿಗಳ ಪೈಕಿ 3233, ವಾಣಿಜ್ಯ ವಿಭಾಗದಲ್ಲಿ 8981 ವಿದ್ಯಾರ್ಥಿಗಳಲ್ಲಿ 6758 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8551 ವಿದ್ಯಾರ್ಥಿಗಳ ಪೈಕಿ 7162 ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದಾರೆ. ನಗರ ಪ್ರದೇಶದ 17,362 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, 13,093 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಹಾಗೂ ಗ್ರಾಮೀಣ ಪ್ರದೇಶದ 5661 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4060 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ 11,259 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6865 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ ಆಂಗ್ಲ ಮಾಧ್ಯಮದಲ್ಲಿ 15,197 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11,909 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 518 ಖಾಸಗಿ ವಿದ್ಯಾರ್ಥಿಗಳಲ್ಲಿ 216 ಹಾಗೂ 2915 ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 1405 ವಿದ್ಯಾರ್ಥಿಗಳು ಉತ್ತೀರ್ಣತೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!