ಶಿಕ್ಷಣ ಜಗತ್ತಿನ ಅತ್ಯಂತ ಶಕ್ತಿಯುತ ಅಸ್ತ್ರ

66

Get real time updates directly on you device, subscribe now.


ತುಮಕೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತುಮಕೂರು ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಉಚಿತ ಸಿಇಟಿ, ನೀಟ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಜಗತ್ತಿನ ಅತ್ಯಂತ ಶಕ್ತಿಯುತ ಅಸ್ತ್ರ ಶಿಕ್ಷಣ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡಲ್ಲಿ ಜೀವನದಲ್ಲಿ ಮಹತ್ವದ ಸಾಧನೆ ಮಾಡಬಹುದು. ಇಂದು ಎಲ್ಲಾ ರಂಗಗಳಲ್ಲಿ ತೀವ್ರ ತರವಾದ ಸ್ಪರ್ಧೆ ಇದ್ದು ಅದನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಸಮೂಹ ಸನ್ನದ್ದರಾಗಿರಬೇಕು. ಇದಕ್ಕಾಗಿ ಶಿಕ್ಷಣ ತರಬೇತಿಯ ಅಗತ್ಯವಿದೆ. ಈ ಮೂಲಕ ನಿಮ್ಮ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಡ ವಿದ್ಯಾರ್ಥಿಗಳಿಗಾಗಿ ಎಬಿವಿಪಿ ಉಚಿತ ತರಬೇತಿ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲೆಂದು ಕರೆ ನೀಡಿದರು.

ವಿದ್ಯಾರ್ಥಿ ನಿರಂತರ ಕಲಿಕೆಯಲ್ಲಿ ತೊಡಗಬೇಕು. ಏನಾದರು ಸಾಧಿಸಬೇಕೆಂಬ ಹಂಬಲ ನಿಮ್ಮಲಿರಬೇಕು. ನಿಮ್ಮದು ಸಾಧನೆಗೆ ಸೂಕ್ತವಾದ ವಯಸ್ಸು ಯುವ ಜನರು ದೇಶದ ಸಂಪತ್ತು ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಅಂತಹ ದೇಶ ಅಭಿವೃದ್ಧಿ ಹೊಂದುತ್ತದೆ. ಪ್ರಸ್ತುತ ಚುನಾವಣೆ ಸನ್ನಿಹಿತವಾಗಿದೆ. ಮತದಾನ ಎಂಬುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ನೀಡಲಾಗಿರುವ ಪವಿತ್ರ ಹಕ್ಕು, ಹಾಗಾಗಿ ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಎಬಿವಿಪಿಯ ರಾಜ್ಯ ಉಪಾದ್ಯಕ್ಷ ಡಾ.ಎಂ.ವಿ.ಅಜಯ್ ಕುಮಾರ್ ಮಾತನಾಡಿ ಯುವಜನತೆ ದೇಶದ ಆಸ್ತಿಯಾಗಿರುವುದರಿಂದ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ಜೀವನ ತತ್ವ ಆದರ್ಶ ಪಾಲಿಸುವ ಮೂಲಕ ರಾಷ್ಟ್ರ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳಿಗೆ ದೇಶ ಭಕ್ತಿ ಮೂಡಿಸುವುದರ ಜೊತೆಗೆ ರಚನಾತ್ಮಕ ಕಾರ್ಯಗಳಾದ ಉಚಿತ ಸಿಇಟಿ, ನೀಟ್ ತರಬೇತಿ ಶಿಬಿರವು ಇಂಜಿನೀಯರಿಂಗ್ ಮತ್ತು ವೈದ್ಯಕೀಯ ಪದವಿಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಬಿವಿಪಿಯ ಜಿಲ್ಲಾ ಪ್ರಮುಖರಾದ ರವೀಂದ್ರ, ಅಕ್ಷಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾ ಡಾ.ಶ್ರೀನಿವಾಸ್ ರಾವ್, ಅನನ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘು, ಎಬಿವಿಪಿ ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ಜಿಲ್ಲಾ ಸಂಚಾಲಕ ಶ್ರೀನಿವಾಸ್, ನಗರ ಉಪಾಧ್ಯಕ್ಷ ಡಾ.ಪೃಥ್ವಿರಾಜ್, ಕಾರ್ಯಕರ್ತರಾದ ಹರ್ಷವರ್ಧನ, ವಿನೋದ್, ಅರ್ಪಿತ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!