ಗುಬ್ಬಿ: ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಗುಣಿ, ಯಲ್ಲಾಪುರ, ವಿರೂಪಾಕ್ಷಿಪುರ, ಅಂಡನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯಕರ್ತರು ಹಾಗೂ ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಯಾವುದೇ ರೀತಿಯ ಕ್ಯಾಂಪೇನ್ ಸ್ಟಾರ್ಗಳನ್ನು ಕರೆಸುವುದಿಲ್ಲ. ನನಗೆ ನನ್ನ ಕ್ಷೇತ್ರದ ಜನರೇ ಸ್ಟಾರ್ ಗಳು, ಅವರ ಆಶೀರ್ವಾದದಿಂದ ಗೆಲುವು ಪಡೆಯುತ್ತೇನೆ ಎಂದರು.
ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಸಾರಿಗೂ ಜನ ನನ್ನನ್ನು ಕೈ ಹಿಡಿದಿದ್ದಾರೆ. ಈ ಬಾರಿ ಇನ್ನೂ ಹೆಚ್ಚಿನ ರೀತಿಯಲ್ಲಿ ನನಗೆ ಮತ ನೀಡಿ ಆಶೀರ್ವದಿಸುತ್ತಾರೆ.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಉತ್ತಮವಾದ ಪ್ರೋತ್ಸಾಹ ದೊರೆಯುತ್ತಿದ್ದು, ಕಾರ್ಯಕರ್ತರೇ ನನ್ನ ಶಕ್ತಿಯಾಗಿದ್ದಾರೆ. ಒಕ್ಕಲಿಗ ಸಮುದಾಯ ಮಾತ್ರವಲ್ಲದೆ ಎಲ್ಲಾ ಸಮುದಾಯಗಳು ನನ್ನ ಜೊತೆಯಲ್ಲಿಯೇ ನಿರಂತರವಾಗಿದ್ದು, ಅವರ ಪ್ರೀತಿ ವಿಶ್ವಾಸದಿಂದ ನಾನು ಮತ್ತೊಮ್ಮೆ ಶಾಸಕನಾಗುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶಂಕರಾನಂದ, ಗ್ರಾಪಂ ಅಧ್ಯಕ್ಷ ರೇವಣ್ಣ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
Comments are closed.