ಪರೇಡ್ ನಡೆಸಿದ ಪ್ಯಾರಾ ಮಿಲಿಟರಿ ಪಡೆ

95

Get real time updates directly on you device, subscribe now.


ಕೊರಟಗೆರೆ: ವಿಧಾನಸಭಾ ಚುನಾವಣೆಯ ರಂಗು ಎಲ್ಲೆಡೆ ಹೆಚ್ಚಾಗಿದೆ. ಕ್ಷೇತ್ರದಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಭಾರತೀಯ ಪ್ಯಾರಾ ಮಿಲಿಟರಿ ಪಡೆಯ ಸೈನಿಕರನ್ನು ನಿಯೋಜಿಸಲಾಗಿದ್ದು, ಈಗಾಗಲೇ ಪಟ್ಟಣ ಹಾಗೂ ಹೋಬಳಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಜೊತೆಗೂಡಿ ಪಥ ಸಂಚಲ ನಡೆಸಿದರು.

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಅಭ್ಯರ್ಥಿಗಳು ತಮ್ಮದೆ ರೀತಿಯಲ್ಲಿ ಪ್ರಚಾರ ಕೆಲಸ ಆರಂಭಿಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದೆ ಇರಲಿ ಎಂದು ಚುನಾವಣಾ ಭದ್ರತೆಗಾಗಿ ಸೈನಿಕರನ್ನು ನಿಯೋಜಿಸಲಾಗಿದೆ.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸೈನಿಕರು ಮತ್ತು ಪೊಲೀಸರು ಪಥಸಂಚಲ ಮಾಡುವ ಮೂಲಕ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಜನರೊಂದಿಗೆ ನಾವಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಮುಕ್ತವಾಗಿ ಪಾಲ್ಗೊಂಡು ಮತದಾನ ಮಾಡಿ ಎಂಬ ಸಂದೇಶ ರವಾನಿಸಿದರು.
ಬಿಎಸ್ಎಫ್ ಹಾಗೂ ಪೊಲೀಸ್ ಇಲಾಖೆಯ ಒಟ್ಟು 100ಕ್ಕೂ ಅಧಿಕ ಸಿಬ್ಬಂದಿ ಶಸ್ತ್ರಧಾರಿಗಳಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸುವ ಮೂಲಕ ಸ್ಥಳೀಯರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.
ಈ ಪಥ ಸಂಚಲದಲ್ಲಿ ಕೊರಟಗೆರೆ ಪೊಲೀಸ್ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಕೆ.ಸುರೇಶ್, ಪಿಎಸ್ಐ ಪ್ರದೀಪ್ ಸಿಂಗ್ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!