ಸಡಗರ ಸಂಭ್ರಮದಿಂದ ರಂಜಾನ್ ಆಚರಣೆ

ಮುಸ್ಲಿಂ ಭಾಂದವರಿಂದ ಸಾಮೂಹಿಕ ಪ್ರಾರ್ಥನೆ- ಪರಸ್ಪರ ಶುಭಾಶಯ ವಿನಿಮಯ

92

Get real time updates directly on you device, subscribe now.


ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.

ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಭಾಂದವರು ಬೆಳಗ್ಗೆ 10.30ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಉಡುಪು ಧರಿಸಿ ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ಕಂಡು ಬಂತು.

ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಭಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಂಧುಗಳಿಗೆ ಹಿಂದೂ ಸಮುದಾಯದವರು ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆ ಸಾರಿದರು.
ಈದ್ಗಾ ಮೈದಾನಕ್ಕೆ ಮುಖಂಡರಾದ ಇಕ್ಬಾಲ್ ಅಹಮದ್, ಸೊಗಡು ಶಿವಣ್ಣ, ನರಸೇಗೌಡ ಅವರು ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.
ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಮಾರ್ಗ ಬದಲಾವಣೆ
ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಭಾಂದವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.

Get real time updates directly on you device, subscribe now.

Comments are closed.

error: Content is protected !!