ಕಲ್ಲು ಹೊಡೆದ ಕಿಡಿಗೇಡಿ ಬಂಧನಕ್ಕೆ ಆಗ್ರಹ

147

Get real time updates directly on you device, subscribe now.


ಕೊರಟಗೆರೆ: ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಲೆಗೆ ಕಲ್ಲೆಸೆದ ಕಿಡಿಗೇಡಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಶನಿವಾರ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೊರಟಗೆರೆ ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿ ಸರ್ಕಲ್ನಲ್ಲಿ ಶುಕ್ರವಾರ ಸಂಜೆ ಕಾಂಗ್ರೆಸ್ ಪಕ್ಷದಿಂದ ಮೆರವಣಿಗೆ ನಡೆಸುವಾಗ ಶಾಸಕ ಡಾ.ಜಿ.ಪರಮೇಶ್ವರ್ ತಲೆಗೆ ಕಲ್ಲೆಸೆದ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ, ಭ್ರಷ್ಟಚಾರದ ಹಣದ ಬಲದಿಂದ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಐಎಎಸ್ ಅಧಿಕಾರಿ ಸರಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ಪ್ರತಿಭಟನೆ ಮಾಡಿದಾಗ ಪೊಲೀಸ್ ಇಲಾಖೆ ಏನು ಮಾಡಿದೆ. ರಾಜ್ಯ ಸರಕಾರ ತಕ್ಷಣ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕಿದೆ. ಪರಮೇಶ್ವರ್ ತಲೆಗೆ ಕಲ್ಲೇಟು ಹಾಕಿದ ಕಿಡಿಗೇಡಿಯನ್ನ ತಕ್ಷಣ ಬಂಧಿಸಬೇಕಿದೆ. ಪೊಲೀಸ್ ಇಲಾಖೆ ನಮ್ಮ ಕಾರ್ಯಕರ್ತರ ತಾಳ್ಮೆ ಪರೀಕ್ಷೆ ಮಾಡಬೇಡಿ, ಮತ್ತೆ ಪರಮೇಶ್ವರ್ ಗೆ ಏನಾದ್ರು ಆದ್ರೆ ಅದಕ್ಕೆ ಜಿಲ್ಲಾಡಳಿತ ಹೊಣೆ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

ತುಮಕೂರು ನಗರಸಭಾ ಮಾಜಿ ಅಧ್ಯಕ್ಷ ವಾಲೆಚಂದ್ರಯ್ಯ ಮಾತನಾಡಿ, ಕರ್ನಾಟಕ ಮತ್ತು ಕೊರಟಗೆರೆ ಜನತೆ ಪರಮೇಶ್ವರ್ ಜೊತೆಯಲ್ಲಿ ಇದ್ದಾರೆ. ಕೊರಟಗೆರೆ ಕ್ಷೇತ್ರದಿಂದ 2023ಕ್ಕೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೆ ನಿಮ್ಮನ್ನು ಗೆಲ್ಲಿಸಿ ಕಳಿಸುತ್ತೇವೆ. ದಲಿತ ಮುಖಂಡನಿಗೆ ಹೀಗಾದರೇ ಇನ್ನೂ ಸಾಮಾನ್ಯ ಜನರ ಪಾಡೇನು, ತಕ್ಷಣ ಪೊಲೀಸ್ ಇಲಾಖೆ ಕಿಡಿಗೇಡಿಯನ್ನು ಬಂಧಿಸಬೇಕಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ ನಾರಾಯಣ್, ಯುವಧ್ಯಕ್ಷ ಬೈರೇಶ್, ಮುಖಂಡರಾದ ಬಲರಾಮಯ್ಯ, ನಂದೀಶ್, ಮಕ್ತಿಯಾರ್, ಕೆ.ಎಲ್.ಆನಂದ್, ಜೆಟ್ಟಿ ಅಗ್ರಹಾರ ನಾಗರಾಜು, ನರಸಿಂಹ ಮೂರ್ತಿ, ರಾಘವೇಂದ್ರ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!