ತುಮಕೂರು: ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಶುಕ್ರವಾರ ನಗರದ ರೈಲ್ವೆ ನಿಲ್ದಾಣ, ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು, ಆಟೋ ಚಾಲಕರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಬೆಳಗ್ಗೆ 8.30ರ ಸುಮಾರಿಗೆ ನಗರದಿಂದ ಬೆಂಗಳೂರಿಗೆ ಹೊರಡುವ ಡೆಮೋ ರೈಲಿನ ವೇಳೆಗೆ ಆಗಮಿಸಿದ ಇಕ್ಬಾಲ್ ಅಹಮದ್ ಪ್ರಯಾಣಿಕರಿಗೆ ಕಾಂಗ್ರೆಸ್ ಪಕ್ಷದ ಕರ ಪತ್ರ ನೀಡಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ರಾಜ್ಯದ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಇಕ್ಬಾಲ್ ಅಹಮದ್, ಡಬಲ್ ಇಂಜಿನ್ ಸರಕಾರ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಅದರಲ್ಲಿ ಮಧ್ಯಮ ವರ್ಗದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಇದರ ಜೊತೆಗೆ ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತುಂಬಿ ತುಳುಕುತಿದ್ದು, ಪಿಎಸ್ಐ ಹಗರಣ, ಕೆಎಸ್ಡಿಎಲ್ ಹಗರಣ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣ ತಲೆ ತಗ್ಗಿಸುವಂತಹ ವಿಚಾರಗಳಾಗಿವೆ. ಇದರಿಂದಾಗ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲು ಕಾತುರರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡು ಜನಮಾನಸದಲ್ಲಿ ಅಚ್ಚಾಗಿದೆ. ಗೃಹ ಲಕ್ಷ್ಮಿ, ಗೃಹಜೋತಿ, ನಿರುದ್ಯೋಗ ಭತ್ಯೆ, ಅನ್ನಭಾಗ್ಯ 10 ಕೆಜಿ ಅಕ್ಕಿ, ಮಹಿಳೆಯರಿಗೆ ಕೆಎಸ್ಆರ್ ಟಿಸಿಯಲ್ಲಿ ಉಚಿತ ಪ್ರಯಾಣ ಸೇರಿದಂತೆ ಹಲವಾರು ಯೋಜನೆಗಳನ್ನು ಜನರು ಒಪ್ಪಿಕೊಂಡಿದ್ದು, ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಡಬಲ್ ಇಂಜಿನ್ ಸರಕಾರದ ಜನವಿರೋಧಿ ನೀತಿಗಳಿಂದ ಬೇಸತ್ತಿರುವ ಜನತೆ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಇದೆ. ತುಮಕೂರು ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯದ ಜೊತೆಗೆ ಶೈಕ್ಷಣಿಕವಾಗಿ ನಗರ ಸಾಕಷ್ಟು ಅಭಿವೃದ್ಧಿ ಹೊಂದುವ ಅಗತ್ಯವಿದೆ. ಎಲ್ಲರಿಗೂ ಸೂರು, ನಗರದಲ್ಲಿ ಶಾಂತಿ ನೆಲೆಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಜನರಿಗೆ ಉತ್ತಮ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ವಾಗಬೇಕಿದೆ. ಈ ನಿಟ್ಟಿನಲ್ಲಿ ನಾನು ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಲಿದ್ದೇನೆ. ಮತದಾರರು ಊಹಾಪೋಹಗಳಿಗೆ ಕಿವಿಗೊಡದೆ ನನಗೆ ಮತ ನೀಡಬೇಕು. ಕಳೆದ 30 ವರ್ಷಗಳಿಂದ ಪಕ್ಷ ನಿಷ್ಟನಾಗಿ ಕೆಲಸ ಮಾಡಿಕೊಂಡಿದ್ದೇನೆ. ಹಾಗಾಗಿ ನನ್ನಗೆ ಟಿಕೆಟ್ ದೊರೆತಿದೆ. ಗೆಲ್ಲುವುದಕ್ಕಾಗಿಯೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ತಿಳಿಸಿದರು.
ಸಿದ್ದಲಿಂಗೇಗೌಡ, ಹೆಚ್.ಸಿ.ಹನುಮಂತಯ್ಯ, ರೇವಣ್ಣಸಿದ್ದಯ್ಯ, ಗುರುಪ್ರಸಾದ್, ಪಾಲಿಕೆ ಸದಸ್ಯೆ ಮುಜೀದಾ ಪೀನಾ ಸೇರಿದಂತೆ ಹಲವರು ಭಾಗವಹಿಸಿದ್ದರು.
Comments are closed.