ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

98

Get real time updates directly on you device, subscribe now.


ತುಮಕೂರು: ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ನಡೆಯಲಿರುವ ಮತದಾನಕ್ಕೆ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಶಾಂತಿಯುತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 262, ತಿಪಟೂರು- 233, ತುರುವೇಕೆರೆ- 229, ಕುಣಿಗಲ್- 264, ತುಮಕೂರು ನಗರ- 254, ತುಮಕೂರು ಗ್ರಾಮಾಂತರ- 226, ಕೊರಟಗೆರೆ- 242, ಗುಬ್ಬಿ- 212, ಶಿರಾ- 267, ಪಾವಗಡ- 246 ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ 248 ಮತಗಟ್ಟೆ ಸೇರಿದಂತೆ ಒಟ್ಟು 2683 ಮತಗಟ್ಟೆ ಸ್ಥಾಪಿಸಲಾಗಿದ್ದು, ಇದರಲ್ಲಿ 510 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅಲ್ಲದೆ 1363 ಮತಗಟ್ಟೆಗಳಿಗೆ ಮೊಟ್ಟಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈಕ್ರೋ ಅಬ್ಸರ್ವರ್ ಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಕರ್ತವ್ಯ ನಿರ್ವಹಿಸಲು 12093 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ. ಅವಶ್ಯಕತೆಗನುಗುಣವಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ನೇಮಕ ಮಾಡಲಾಗಿದೆ. ಬಿಎಸ್ಎಫ್, ತಮಿಳುನಾಡು ಹಾಗೂ ಜಾರ್ಖಂಡ್ನ ಪೊಲೀಸ್ ಪಡೆ, ಸಿಎಪಿಎಫ್ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಮತದಾರರು ತಮ್ಮ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದ್ದು, ಮನೆಯಲ್ಲಿ ಕೂರದೆ ಮತಗಟ್ಟೆಗಳಿಗೆ ಭೇಟಿ ನೀಡಿ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕೆಂದು ಮನವಿ ಮಾಡಿದರು.

Get real time updates directly on you device, subscribe now.

Comments are closed.

error: Content is protected !!